ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚನ್ನಗಿರಿ ಠಾಣೆ ಶಾಸಕರಿಂದ ಪ್ರತಿಭಟನೆ - MLAs and Congress workers Protest i
🎬 Watch Now: Feature Video
ದಾವಣಗೆರೆ: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ಠಾಣೆಯೆದುರು ಕುಳಿತು ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಪ್ರತಿಭಟನೆ ನಡೆಸಿದರು. ಪೊಲೀಸರ ದೌರ್ಜನ್ಯ ಹೆಚ್ಚಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ವಿನಾಕಾರಣ ದೂರು ದಾಖಲು ಮಾಡುತ್ತಿದ್ದಾರೆ. ಈ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಚನ್ನಗಿರಿ ಪೋಲಿಸ್ ಠಾಣೆ ಸಿಪಿಐ ಮಧು ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕಳೆದ ಒಂದು ತಿಂಗಳಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಮಾಜಿ ಶಾಸಕರ ಬೆಂಬಲಿಗರ ಮಾತು ಕೇಳಿ ಉದ್ದೇಶಪೂರ್ವಕವಾಗಿ ದೂರು ದಾಖಲಿಸುವ ಮೂಲಕ ಷಡ್ಯಂತ್ರ ಮಾಡುತ್ತಿದ್ದಾರೆ ಎಂದರು. ಪ್ರತಿಭಟನಾ ಸ್ಥಳಕ್ಕೆ ಎಸ್‌ಪಿ ಡಾ. ಅರುಣ್ ಕೆ. ಅವರು ಬರುವಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶಾಸಕರು ಪಟ್ಟು ಹಿಡಿದರು. ಚನ್ನಗಿರಿ ಪೊಲೀಸರು ಶಾಸಕ ಬಸವರಾಜ್ ವಿ. ಶಿವಗಂಗಾ ಅವರೊಂದಿಗೆ ಮಾತನಾಡಿ, ಪರಿಸ್ಥಿತಿ ತಿಳಿಗೊಳಿಸಿದರು.