ವಾಚ್​ ವಿಡಿಯೋ: ಸಾವಯವ ಕೃಷಿ ಉತ್ತೇಜಿಸಲು ಸ್ವತಃ ನೇಗಿಲು ಹಿಡಿದ ಹೆಚ್ಚುವರಿ ಜಿಲ್ಲಾಧಿಕಾರಿ..

🎬 Watch Now: Feature Video

thumbnail

By

Published : Feb 14, 2023, 8:13 PM IST

ರೇವಾ(ಮಧ್ಯಪ್ರದೇಶ): ಸಾವಯವ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದು, ಇದೀಗ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಶೈಲೇಂದ್ರ ಸಿಂಗ್​ ಅವರೇ ಸ್ವತಃ ನೇಗಿಲು ಹಿಡಿದು ಹೊಲಗಳಲ್ಲಿ ಕೆಲಸ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ರೇವಾ ಹೆಚ್ಚುವರಿ ಜಿಲ್ಲಾಧಿಕಾರಿ ಶೈಲೇಂದ್ರ ಸಿಂಗ್ ಹೊಲದಲ್ಲಿ ನೇಗಿಲು ಹಿಡಿದು ಕೆಲಸ ಮಾಡುತ್ತಿರುವ ವಿಡಿಯೋ ಕೂಡ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. 

ನಟ ಮನೋಜ್ ಕುಮಾರ್ ಅಭಿನಯಿಸಿದ್ದ ಪಾತ್ರದಂತೆಯೇ ಶೈಲೇಂದ್ರ ಸಿಂಗ್ ಅವರು ಮಣ್ಣಿನಿಂದ ಚಿನ್ನವನ್ನು ತೆಗೆಯಲು ನೇಗಿಲಲ್ಲಿ ಉಳುಮೆ ಮಾಡುತ್ತಿರುವುದು ಕಂಡು ಬಂದಿದೆ. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಉನ್ನತ ಆಡಳಿತಾಧಿಕಾರಿಯೊಬ್ಬರು ನೇಗಿಲು ಹಿಡಿದು ಕೃಷಿ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಸಾವಯವ ಕೃಷಿಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ ಮಧ್ಯಪ್ರದೇಶ ಸರ್ಕಾರವು ಪ್ರತಿದಿನ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಲೇ ಇದೆ. ರೇವಾದ ಹೆಚ್ಚುವರಿ ಜಿಲ್ಲಾಧಿಕಾರಿ ಶೈಲೇಂದ್ರ ಸಿಂಗ್ ಸರ್ಕಾರದ ಆಶಯವನ್ನು ವಿಸ್ತರಿಸಲು ಕಾರ್ಯಪ್ರವೃತ್ತರಾಗಿದ್ದಾರೆ. ಇದಕ್ಕಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಶೈಲೇಂದ್ರ ಸಿಂಗ್ ಅವರು ಜಿಲ್ಲಾದ್ಯಂತ ಒಂದು ಸ್ಥಳದಿಂದ ಸ್ಥಳಕ್ಕೆ ತೆರಳಿ, ಮೊದಲು ಸಾವಯವ ಕೃಷಿ ಮಾಡುವಂತೆ ತಿಳಿಸಿ ನಂತರ ಜನರೊಂದಿಗೆ ಸ್ವತಃ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಇದರಲ್ಲಿ ನಟ ಮನೋಜ್ ಕುಮಾರ್ ಮಾದರಿಯಲ್ಲಿ ಧೋತಿ ಧರಿಸಿ ಕೈಯಲ್ಲಿ ನೇಗಿಲು ಹಿಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ವಿಡಿಯೋ ವೈರಲ್​ ಆಗುತ್ತಿರುವುದರ ಜೊತೆಗೆ ಎಡಿಎಂ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಶೈಲೇಂದ್ರ ಸಿಂಗ್, ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಸಂವಹನ ಮತ್ತು ಸರ್ಕಾರದ ಯೋಜನೆಗಳ ಪ್ರಸಾರಕ್ಕಾಗಿ ಕಾಲಕಾಲಕ್ಕೆ ಸರ್ಕಾರದ ಮಟ್ಟದಲ್ಲಿ ಸೂಚನೆಗಳನ್ನು ನೀಡಲಾಗುತ್ತದೆ. ಇದರ ಅಡಿ, ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಯನ್ನು ಉತ್ತೇಜಿಸುವುದು ಮತ್ತು ಬಳಸುವುದು ನಮ್ಮ ಪರಿಸರ ವ್ಯವಸ್ಥೆ ಮತ್ತು ನಮ್ಮ ಆರೋಗ್ಯದ ದೃಷ್ಟಿಯಿಂದ ಹೆಚ್ಚು ಉತ್ತಮವಾಗಿದೆ. 

ಈ ವಿಷಯಗಳನ್ನು ಪ್ರಚಾರ ಮಾಡಲು ನಾವು ಕೆಲವು ವಿಡಿಯೋಗಳನ್ನು ಮಾಡಿದ್ದೇವೆ. ಇದರಲ್ಲಿ ನಟ ಮನೋಜ್ ಕುಮಾರ್ ಅವರ ಚಲನಚಿತ್ರದ ಮೇರೆ ದೇಶ್ ಕಿ ಧರ್ತಿ ಹಾಡಿಗೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ. ಹೊಲ-ಬೆಳೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುವುದು ಆಡಳಿತದ ಪ್ರಯತ್ನವಾಗಿದ್ದು, ಅವುಗಳನ್ನು ಉತ್ತೇಜಿಸಲು ಇಂತಹ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ನೋಡಿ: ಖೇಲೋ ಇಂಡಿಯಾ ವಿಂಟರ್ ಗೇಮ್ಸ್ ಮುಕ್ತಾಯ.. ಅದ್ದೂರಿ ತೆರೆ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.