Watch.. ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಂದಿಳಿದ ಲೋಹದ ಹಕ್ಕಿ - etv bharat kannada
🎬 Watch Now: Feature Video
ಶಿವಮೊಗ್ಗ: ತಾಕೂಕಿನ ಸೋಗಾನೆಯಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಲೋಹದ ಹಕ್ಕಿ ಬಂದಿಳಿದಿದೆ. ವಿಮಾನ ನಿಲ್ದಾಣವನ್ನು ಇದೇ ಫೆ.27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಅಂದು ಪ್ರಧಾನಿ ದೆಹಲಿಯಿಂದ ನೇರವಾಗಿ ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಪ್ರಧಾನಿ ಆಗಮಿಸುತ್ತಿರುವ ಹಿನ್ನೆಲೆ ಡಿಸಿಜಿಎ ಇಂದು ವಿಮಾನ ನಿಲ್ದಾಣದ ರನ್ ವೇ ಪರೀಕ್ಷೆ ನಡೆಸಿದೆ. ಇದಕ್ಕಾಗಿ ಭಾರತೀಯ ವಾಯು ಸೇನೆಯ ವಿಮಾನ ಮೊದಲ ಬಾರಿಗೆ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಈ ವೇಳೆ, ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಎಸ್ಪಿ ವಿಥುನ್ ಕುಮಾರ್ ಸೇರಿದಂತೆ ಅನೇಕರು ಹಾಜರಿದ್ದರು.
ಇದನ್ನೂ ಓದಿ:ಮಾದಪ್ಪನ ಬೆಟ್ಟದಲ್ಲಿ ಶಿವರಾತ್ರಿ ರಥೋತ್ಸವ: ಲಕ್ಷಾಂತರ ಮಂದಿ ಭಾಗಿ-ವಿಡಿಯೋ