ಭಾರತ್ ಜೋಡೋಗೆ ಫಾರೂಕ್ ಅಬ್ದುಲ್ಲಾ, ಮೆಹಬೂಬ್ ಮುಫ್ತಿ ಸಾಥ್: ಮಾಫಿ ಮಾಂಗೋ ಯಾತ್ರೆ ಎಂದು ಬಿಜೆಪಿ ನಾಯಕರ ಲೇವಡಿ..! - Etv bharat Kannada
🎬 Watch Now: Feature Video
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಅಂತಿಮ ಹಂತ ತಲುಪಿದೆ. ಇಂದು ಕಾಶ್ಮೀರ ಕಣಿವೆಯಲ್ಲಿ ಸಾಗಿದ ಯಾತ್ರೆಯಲ್ಲಿ ಪಕ್ಷದ ಸ್ಥಳೀಯ ನಾಯಕರಾದ ಡಾ.ಫಾರೂಕ್ ಅಬ್ದುಲ್ಲಾ, ಉಮರ್ ಅಬ್ದುಲ್ಲಾ, ತಾರಿಕ್ ಅಹ್ಮದ್ ಕರ್ರಾ ಮತ್ತು ಪಿಡಿಪಿಯ ಮೆಹಬೂಬಾ ಮುಫ್ತಿ ಪಾಲ್ಗೊಂಡರು. ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆಹಾಕಿ ಬೆಂಬಲ ನೀಡಿದರು.
ಕಾಶ್ಮೀರದಲ್ಲಿ ಭಾರತ ಜೋಡೋ ಮುಂದುವರೆದಿರುವಂತೆ, ಸ್ಥಳೀಯ ಬಿಜೆಪಿ ನಾಯಕ ಅಲ್ತಾಫ್ ಠಾಕೂರ್, ಭಾರತ್ ಜೋಡೋ ಯಾತ್ರೆಯನ್ನು 'ಮಾಫಿ ಮಾಂಗೋ ಯಾತ್ರೆ' ಎಂದು ಟೀಕಿಸಿದ್ದಾರೆ. ಕಣಿವೆಯ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ, ಅಲ್ಲದೇ ಖಾಲಿ ಪಾತ್ರೆಗಳು ಹೆಚ್ಚು ಶಬ್ದವನ್ನು ಮಾಡುತ್ತವೆ ಎಂದು ಲೇವಡಿ ಮಾಡಿದ್ದಾರೆ. ಇಲ್ಲಿ ನಡೆಯುತ್ತಿರುವ ಜೋಡೋ ಯಾತ್ರೆಯಲ್ಲಿ ಕೇವಲ ಕಾಂಗ್ರೆಸ್ ಮಾತ್ರವಲ್ಲದೇ ಅದರಲ್ಲಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಕೂಡ ಭಾಗಿಯಾಗಿದೆ.
ಕಾಶ್ಮೀರದ ಕಣಿವೆಯಲ್ಲಿ ಕಾಂಗ್ರೆಸ್ ಪಕ್ಷದ ಬಲ ಸಂಪೂರ್ಣವಾಗಿ ನೆಲಕಚ್ಚಿದೆ. ಅದಕ್ಕಾಗಿ ಇತರ ಪಕ್ಷಗಳ ಬೆಂಬಲವನ್ನು ಕಾಂಗ್ರೆಸ್ ಬಯಸುತ್ತಿದೆ ಎಂದು ಅವರು ಲೇವಡಿ ಮಾಡಿದ್ದಾರೆ. ಇನ್ನು ಯಾತ್ರೆಯಲ್ಲಿ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ಜಾ ಮುಫ್ತಿ ಕೂಡ ಭಾಗಿಯಾಗಿದ್ದರು.
ಇದನ್ನೂ ಓದಿ: ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ 11 ವರ್ಷದ ಬಾಲಕ ಸಾವು..