ಐತಿಹಾಸಿಕ ಹರಿಹರೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
🎬 Watch Now: Feature Video
ದಾವಣಗೆರೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿರುವ ಐತಿಹಾಸಿಕ ಹರಿಹರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಪ್ರಚಾರದಲ್ಲಿರುವ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ರಾಜ್ಯಾದ್ಯಂತ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ರೋಡ್ ಶೋ ನಡೆಸಿ ಪ್ರಚಾರ ನಡೆಸುತ್ತಿದ್ದಾರೆ.
ಹರಿಹರೇಶ್ವರ ದೇವಸ್ಥಾನಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಡಿಕೇರಿಗೆ ಪ್ರಯಾಣ ಬೆಳೆಸಿದ ಅಮಿತ್ ಶಾ ಅವರು ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂ. ಪಿ. ಅಪ್ಪಚ್ಚು ರಂಜನ್ ಮತ್ತು ವಿರಾಜಪೇಟೆ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಜಿ ಬೋಪಯ್ಯ ಪರ ರೋಡ್ ಶೋ ನಡೆಸಿ ಮತಯಾಚಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ತೆರೆದ ವಾಹನದಲ್ಲಿ ತೆರಳಿದ ಶಾ, ಅಭ್ಯರ್ಥಿ ಪರ ಮತಯಾಚನೆ ಮಾಡಿದರು. ಆದರೆ ಬೆಳಗ್ಗೆ 10.30ಕ್ಕೆ ಆಗಮಿಸಬೇಕಿದ್ದ ಅವರು ತಡವಾಗಿ ಬಂದ ಕಾರಣ ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿ ಉಡುಪಿ ಜಿಲ್ಲೆಯ ಕಾಪುವಿಗೆ ಪ್ರಯಾಣ ಬೆಳೆಸಿದರು.
ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆ: ಮತದಾನ ಮಾಡಿದ ಹಿರಿಯ ನಟಿ ಡಾ. ಎಂ. ಲೀಲಾವತಿ