ಮುಂಬೈಗೆ ಬಂದಿಳಿದ ಆಪ್ ಸಿಎಂಗಳು: ಠಾಕ್ರೆ ಮನೆಯಲ್ಲಿ ಕೇಜ್ರಿವಾಲ್, ಭಗವಂತ್ ಮಾನ್ ಸಭೆ - Sharad Pawar in Mumbai
🎬 Watch Now: Feature Video
ಮುಂಬೈ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಬಯಸಿವೆ. ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಂದಾಗಿ ಒಂದು ರಂಗವನ್ನು ನಿರ್ಮಿಸುವ ಚಿಂತನೆಯಲ್ಲಿದ್ದಾರೆ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮುಂಬೈಗೆ ಆಗಮಿಸಿದ್ದರು. ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮುಂಬೈಗೆ ಎರಡು ದಿನಗಳ ಭೇಟಿಯಲ್ಲಿದ್ದಾರೆ. ಉಭಯ ನಾಯಕರು ಮುಂಬೈನಲ್ಲಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರೀಯಲ್ಲಿ ಅವರನ್ನು ಭೇಟಿ ಮಾಡಿದರು. ಅಲ್ಲಿ ಸಭೆ ನಡೆಯುತ್ತಿದೆ.
ಈ ಮುಂಬೈ ಭೇಟಿಯಲ್ಲಿ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಅವರು ಮಾಜಿ ಸಿಎಂ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಹಿಂದೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಉದ್ಧವ್ ಠಾಕ್ರೆ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಆ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದರು. ಆಗ ವಿರೋಧ ಪಕ್ಷಗಳು ಒಂದಾಗುವ ಅವಶ್ಯಕತೆ ಇದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನೂ ಅರವಿಂದ್ ಕೇಜ್ರಿವಾಲ್ ಭೇಟಿಯಾಗಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಮೇ 23 ರಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದರು. ನಂತರ ಅವರು ಸಂಜೆ ಮುಂಬೈಗೆ ಬಂದಿಳಿದಿದ್ದಾರೆ.
ಕೇಜ್ರಿವಾಲ್, ಮಾನ್ ಮತ್ತು ಇತರ ಎಎಪಿ ನಾಯಕರು ಬುಧವಾರ ಮಧ್ಯಾಹ್ನ ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರನ್ನು ಅವರ ನಿವಾಸದಲ್ಲಿ ಮತ್ತು ಪವಾರ್ ಅವರನ್ನು ಗುರುವಾರ ಮಧ್ಯಾಹ್ನ 3 ಗಂಟೆಗೆ ರಾಜ್ಯ ಆಡಳಿತ ಕೇಂದ್ರದ ಎದುರಿನ ಯಶವಂತರಾವ್ ಚವಾಣ್ ಕೇಂದ್ರದಲ್ಲಿ ಭೇಟಿಯಾಗಲಿದ್ದಾರೆ.
ಇದನ್ನೂ ಓದಿ: ಕೇಂದ್ರದ ಸುಗ್ರೀವಾಜ್ಞೆಗೆ ಕೇಜ್ರಿವಾಲ್ ವಿರೋಧ... ಮೋದಿ ವಿರುದ್ಧ ಹೋರಾಟಕ್ಕೆ ಮಮತಾ ಸಾಥ್!