ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದ ಆಟೋ: ಎಂಟು ವಿದ್ಯಾರ್ಥಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ - ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ
🎬 Watch Now: Feature Video
Published : Nov 22, 2023, 1:08 PM IST
ವಿಶಾಖಪಟ್ಟಣ (ಆಂಧ್ರಪ್ರದೇಶ): ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋವೊಂದು ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ ಪರಿಣಾಮ ಆಟೋದಲ್ಲಿದ್ದ ಎಂಟು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ವಿಶಾಖಪಟ್ಟಣದ ಸಂಗಮ್ ಸರತ್ ಥಿಯೇಟರ್ ಬಳಿಯ ಜಂಕ್ಷನ್ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಘಟನೆ ಬಗ್ಗೆ ಡಿಸಿಪಿ ಶ್ರೀನಿವಾಸ್ ರಾವ್ ಮಾಹಿತಿ ನೀಡಿ, ಆಟೋದಲ್ಲಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಅಪಘಾತದಲ್ಲಿ ಎಂಟು ಮಕ್ಕಳು ಗಾಯಗೊಂಡಿದ್ದು, ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ ನಾಲ್ವರು ಮಕ್ಕಳಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಉಳಿದ ಮಕ್ಕಳಿಗೆ ಚಿಕಿತ್ಸೆ ಮುಂದುವರಿದಿದೆ. ಅವರಲ್ಲಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ಅವರು ತಿಳಿಸಿದ್ದಾರೆ.
ಲಾರಿ ಚಾಲಕ ಹಾಗೂ ಕ್ಲೀನರ್ ಅನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯ ವಿಡಿಯೋ ಹತ್ತಿರದ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ: ವೀಣಾ ಕಾಶಪ್ಪನವರ್ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರಾದ ಕಾಂಗ್ರೆಸ್ ನಾಯಕಿ