ಕಿಡಿಗೇಡಿಗಳಿಂದ ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ಬೆಂಕಿ ಶಂಕೆ: ವಿಡಿಯೋ - ಲಕ್ಷ್ಮಿಪುರಂ ಪೊಲೀಸ್ ಠಾಣೆ
🎬 Watch Now: Feature Video
ಮೈಸೂರು: ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕೃತ್ಯ ನಗರದ ಸಿದ್ದಪ್ಪ ವೃತ್ತದ ಬಳಿ ನಡೆದಿದ್ದು, ತಕ್ಷಣ ಸ್ಥಳಕ್ಕೆ ಆಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದು, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ನಗರದ ಸಿದ್ದಪ್ಪ ವೃತ್ತದ ಬಳಿ ರವೀಂದ್ರ ಎಂಬವವರಿಗೆ ಸೇರಿದ ಪ್ಯಾಸೆಂಜರ್ ಆಟೋ ಬೆಂಕಿಗೆ ಆಹುತಿಯಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಕಲೆ ಹಾಕುತ್ತಿದ್ದಾರೆ.
ಇದನ್ನೂ ನೋಡಿ: ಪ್ರತ್ಯೇಕ ಘಟನೆ: ಗೋದಾಮಿಗೆ ಬೆಂಕಿ ಬಿದ್ದು ಫರ್ನೀಚರ್ ಬೆಂಕಿಗಾಹುತಿ.. ವಾಹನಕ್ಕೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿ