ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ - ಪೊಲೀಸ್ ಕಮೀಷನರ್ ಗುಪ್ತಾ ಸಖತ್ ಡಾನ್ಸ್ - ಪೊಲೀಸ್ ಕಮೀಷನರ್ ರಮಣಗುಪ್ತ

🎬 Watch Now: Feature Video

thumbnail

By

Published : Feb 25, 2023, 2:35 PM IST

ಹುಬ್ಬಳ್ಳಿ: ವ್ಯಸನ ಮುಕ್ತ ಸಮಾಜ ನಿರ್ಮಿಸುವ ಉದ್ದೇಶದಿಂದ ನಗರದಲ್ಲಿಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಬೃಹತ್ ವಾಕಥಾನ್ ಆಯೋಜಿಸಲಾಗಿತ್ತು. ನಗರದ ವಿದ್ಯಾನಗರದ ಬಿ ವಿ ಬಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಚಾಲನೆ ನೀಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರಮಣಗುಪ್ತ ಅವರು ನಗರದ ಪ್ರಮುಖ ಬೀದಿಗಳಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ವಿವಿಧ ಅಪರಾಧ ಪ್ರಕರಣಗಳಿಂದಾಗುವ ದುಷ್ಪರಿಣಾಮಗಳ ಕುರಿತು ಕಾಲ ನಡಿಗೆ ಮೂಲಕ ಜಾಗೃತಿ ಮೂಡಿಸಿದರು‌. 

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷರೇಟ್ , ಹುಬ್ಬಳ್ಳಿ ವೆಸ್ಟ್ ರೋಟರಿ ಸಂಸ್ಥೆ ಹಾಗೂ ಎಂ ಸ್ಕ್ವೇರ್ ಸಂಸ್ಥೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆರಂಭಗೊಂಡ ಬೃಹತ್ ವಾಕಥಾನ್ ನಲ್ಲಿ 500ಕ್ಕೂ ಹೆಚ್ಚು ಶಾಲಾ ಮಕ್ಕಳು, ಪೊಲೀಸರು ಪಾಲ್ಗೊಂಡಿದ್ದರು. ಈ ವೇಳೆ, ಮಾತನಾಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರಮಣಗುಪ್ತ ಅವರು ಸಾಕಷ್ಟು ಯುವ ಪೀಳಿಗೆ ದಿನೇ ದಿನೇ ಮಾದಕ ವ್ಯಸನಿಗಳಾಗುತ್ತಿದ್ದು ಹಾಗೂ ಇದನ್ನು ಬಳಸಿಕೊಂಡ ಮಾದಕ ವಸ್ತು ಸಾಗಣೆದಾರರು ಇಂತಹ ವಸ್ತುಗಳನ್ನು ಕಳ್ಳ ಸಾಗಣೆ ಮಾಡಿ ದೇಶದ ಯುವ ಶಕ್ತಿಗೆ ಮಾರಕವಾಗುತ್ತಿದ್ದಾರೆ. ಇದರ ಬಗ್ಗೆ ಸಾರ್ವಜನಿಕರಿಗೆ ಅದರಲ್ಲೂ ವಿಶೇಷವಾಗಿ ಯುವ ಪೀಳಿಗೆಗೆ ಅರಿವು ಮೂಡಿಸುವುದು ಅವಶ್ಯಕವಾಗಿರುತ್ತದೆ. ಮಾದಕ ದ್ರವ್ಯ ಬಳಕೆ ಹಾಗೂ ಕಳ್ಳ ಸಾಗಣೆ ಅಂತಾರಾಷ್ಟ್ರೀಯ ಸಮಸ್ಯೆಯಾಗಿದೆ ಎಂದರು.

ಮಾದಕ ದ್ರವ್ಯ ಬಳಕೆ ಅಪಾಯಕಾರಿಯಾಗಿದ್ದು, ಇದು ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗೆ ಕಾರಣವಾಗುತ್ತದೆ. ಸರ್ಕಾರ, ಸಂಘ ಸಂಸ್ಥೆಗಳು, ಜನರು ಒಂದಾಗಿ ಇದರ ವಿರುದ್ಧ ಸಮರ ಸಾರಬೇಕು. ಭಾರತದಲ್ಲಿ ಮಾದಕವಸ್ತುಗಳ ಬಳಕೆ ನಿಷೇಧ ಇದ್ದರೂ ಕಳ್ಳದಾರಿಯಲ್ಲಿ ನುಸುಳುತ್ತಿದೆ. ಅನಕ್ಷರಸ್ಥರು, ಸ್ಲಂಪ್ರದೇಶಗಳಲ್ಲಿ ಇದರ ಅಪಾಯದ ಅರಿವಿಲ್ಲದೆ ಸೇವನೆ ಮಾಡುತ್ತಿರುವ ಬಗ್ಗೆ ಹೆಚ್ಚು ಕೇಳಿ ಬರುತ್ತಿದೆ. ಇಂತಹ ಪ್ರಕರಣಗಳು ಒಂದು ಪ್ರದೇಶಕ್ಕೆ ಸೀಮಿತವಾಗಿರದೆ ಅನೇಕ ಕಡೆಗಳಲ್ಲಿ ಹರಡಿದೆ. ಆದ್ದರಿಂದ ಸಮಾಜ ಎಚ್ಚರಿಕೆಯಿಂದ ಇದ್ದು ತೊಲಗಿಸಲು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರಮಣಗುಪ್ತ ಡಿಜೆ ಹಾಡಿಗೆ ಸಖತ್ ಸ್ಟೆಪ್ ಹಾಕಿ ಕುಣಿದು ಕುಪ್ಪಳಿಸಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ: ಭಾರತಕ್ಕೆ ಆಗಮಿಸಿರುವ ಜರ್ಮನ್ ಚಾನ್ಸಲರ್​ ಓಲಾಫ್ ಸ್ಕೋಲ್ಜ್.. ನಾಳೆ ಬೆಂಗಳೂರಿಗೆ ಭೇಟಿ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.