ಒಳ ಮೀಸಲಾತಿ: ಮುಂದುವರೆದ ಬಂಜಾರರ ಹೋರಾಟ; ನಾರಾಯಣಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ - ಈಟಿವಿ ಭಾರತ ಕನ್ನಡ
🎬 Watch Now: Feature Video
ಶಿವಮೊಗ್ಗ: ಒಳ ಮೀಸಲಾತಿ ಕಡಿತ ಮಾಡಿರುವುದಕ್ಕೆ ಬಂಜಾರ ಸಮುದಾಯದ ಹೋರಾಟ ಮುಂದುವರೆದಿದೆ. ಶಿವಮೊಗ್ಗ ತಾಲೂಕು ಹಾರನಹಳ್ಳಿ ಹೋಬಳಿಯ ನಾರಾಯಣಪುರ ಗ್ರಾಮದಲ್ಲಿಂದು ಬಂಜಾರ ಸಮುದಾಯದವರು ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ಕಳೆದ ಎರಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಒಳ ಮೀಸಲಾತಿ ವಿರೋಧಿಸಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಮನೆ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು. ಇಂದು ನಾರಾಯಣಪುರ ಗ್ರಾಮದಲ್ಲಿ ಬಂಜಾರ ಸಮುದಾಯದವರು ರಸ್ತೆ ತಡೆ ನಡೆಸಿದ್ದು. ಯುವಕರು ಫ್ಲೆಕ್ಸ್ ಕಿತ್ತು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರು ಮೀಸಲಾತಿ ಕಡಿತ ವರದಿ ವಾಪಸ್ ತರಿಸಿಕೊಳ್ಳಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಿಂದಾಗಿ ಆಯನೂರು ಹಾಗೂ ಸವಳಂಗ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ನಂತರ ಕುಂಸಿ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮಧ್ಯಾಹ್ನ ಶಿವಮೊಗ್ಗ ತಾಲೂಕು ಅಬ್ಬಲಗೆರೆ ಗ್ರಾಮದಲ್ಲಿ ಶಿವಮೊಗ್ಗ ಸವಳಂಗ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಹೇಳಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ: ಮೂವರಿಗೆ ನ್ಯಾಯಾಂಗ ಬಂಧನ