ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಸಿಎಂ ಬೊಮ್ಮಾಯಿ - ಶಿರಾಳ ಕೊಪ್ಪದಲ್ಲಿ ಗೋಡೆ ಬರಹ
🎬 Watch Now: Feature Video
ಜನ ಸಂಕಲ್ಪ ಯಾತ್ರೆಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗಿದೆ. ಜನ ಸಂಕಲ್ಪ ಯಾತ್ರೆಯು ಮುಂಬೈ ಕರ್ನಾಟಕ, ಹೈದ್ರಾಬಾದ್ ಕರ್ನಾಟಕದಲ್ಲಿ ಯಶಸ್ವಿಯಾಗಿದೆ. ಇದು ಚುನಾವಣೆ ವರ್ಷ, ಹಾಗಾಗಿ ಜನರ ಬಳಿ ಹೋಗುವ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಪ್ರತಿ ಚುನಾವಣೆಯಂತೆ ಈ ಬಾರಿಯೂ ಜನರ ಬಳಿ ಹೋಗುತ್ತಿದ್ದೇವೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಆಗುತ್ತಿದೆ ಎಂದರು. ಶಿವಮೊಗ್ಗದ ಶಿರಾಳ ಕೊಪ್ಪದಲ್ಲಿ ಗೋಡೆ ಬರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಲ್ಲಿನ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು. ಮುಂದುವರೆದು, ತವರು ಕ್ಷೇತ್ರಕ್ಕೆ ಹೋಗುತ್ತಿದ್ದೀರಾ ಎಂದು ಮಾಧ್ಯಮದವರು ಪ್ರಶ್ನಿಸಿದಾಗ, ಯಾಕೆ ಹೋಗಬಾರದಾ? ಎಂದು ನಕ್ಕು ಮುಂದೆ ನಡೆದರು.
Last Updated : Feb 3, 2023, 8:34 PM IST