ಮುಖ್ಯಮಂತ್ರಿಯಾಗಿ ಪ್ರಮಾಣವಚನಕ್ಕೂ ಮುನ್ನ ಭಜನ್‌ಲಾಲ್ ಶರ್ಮಾ ಪೂಜೆ, ಪ್ರಾರ್ಥನೆ - Govind Dev temple
🎬 Watch Now: Feature Video
Published : Dec 15, 2023, 9:55 AM IST
ಜೈಪುರ, ರಾಜಸ್ಥಾನ: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಸನ್ನದ್ಧವಾಗಿದೆ. ಭಜನ್ ಲಾಲ್ ಶರ್ಮಾ ಅವರು ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜಸ್ಥಾನ ನಿಯೋಜಿತ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರಿಂದು ಜೈಪುರದ ಗೋವಿಂದ್ ದೇವ್ ದೇವಸ್ಥಾನದಲ್ಲಿ ಪೂಜೆ ಕೊಟ್ಟು, ಪ್ರಾರ್ಥನೆ ಸಲ್ಲಿಸಿದರು.
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನ ರಾಜಸ್ಥಾನ ನಿಯೋಜಿತ ಸಿಎಂ ಭಜನ್‌ಲಾಲ್ ಶರ್ಮಾ ಜೈಪುರದ ಗೋವಿಂದ್ ದೇವ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಿಯೋಜಿತ ಉಪಮುಖ್ಯಮಂತ್ರಿ ಡಾ. ಪ್ರೇಮ್ ಚಂದ್ ಬೈರ್ವಾ ಮಾತನಾಡಿ "ಈ ಹುದ್ದೆಗಾಗಿ ಅಥವಾ ಚುನಾವಣಾ ಟಿಕೆಟ್‌ಗಾಗಿ ನಾನು ಎಂದಿಗೂ ಯಾವುದೇ ನಿರೀಕ್ಷೆಯನ್ನು ಹೊಂದಿರಲಿಲ್ಲ. ಪಕ್ಷ ನನಗೆ ಯಾವುದೇ ಜವಾಬ್ದಾರಿಯನ್ನು ನೀಡಿದರೂ, ನಾನು ಅದನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಮಾಡುತ್ತೇನೆ. ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ರಾಜಸ್ಥಾನ ಹಿಂದೆ ಸರಿದಿದೆ. ರಾಜಸ್ಥಾನದ ಜನತೆಗೆ ಮೋಸ ಮಾಡಿದ್ದಾರೆ'' ಎಂದು ತಿಳಿಸಿದರು.
ಇದನ್ನೂ ಓದಿ: ಶುಕ್ರವಾರ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಪ್ರಮಾಣವಚನ ಸ್ವೀಕಾರ