ರಾಷ್ಟ್ರ ರಾಜಧಾನಿ ದೆಹಲಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ
🎬 Watch Now: Feature Video
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾರಥ್ಯದಲ್ಲಿ ಭಾರತ್ ಜೋಡೋ ಯಾತ್ರೆಯು ಹರಿಯಾಣದ ಫರಿದಾಬಾದ್‌ನಲ್ಲಿರುವ NHPC ಮೆಟ್ರೋ ನಿಲ್ದಾಣದಿಂದ ರಾಷ್ಟ್ರ ರಾಜಧಾನಿ ದೆಹಲಿಯನ್ನು ಪ್ರವೇಶಿಸಿತು. ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾದ ಯಾತ್ರೆಯು ಫೆಬ್ರವರಿ 2023 ರ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ. ಇನ್ನು ಪಾದಯಾತ್ರೆ ದೆಹಲಿ ಪ್ರವೇಶಿಸುತ್ತಿದ್ದಂತೆ ಮಾತನಾಡಿದ ರಾಹುಲ್, 'ಕೆಲವರು ದ್ವೇಷವನ್ನು ಹರಡುತ್ತಿದ್ದಾರೆ. ಆದರೆ, ದೇಶದ ಜನಸಾಮಾನ್ಯರು ಪ್ರೀತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರತಿ ರಾಜ್ಯದಲ್ಲೂ ಲಕ್ಷಗಟ್ಟಲೇ ಜನರು ಯಾತ್ರೆಯಲ್ಲಿ ಭಾಗಿಯಾಗಿ ಬೆಂಬಲ ನೀಡಿದ್ದಾರೆ. ನಿಮ್ಮ ದ್ವೇಷದ ಬಜಾರ್‌ನಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾವು ಬಂದಿದ್ದೇವೆ ಎಂದು ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
Last Updated : Feb 3, 2023, 8:36 PM IST