ಬಿಜೆಪಿ ಭದ್ರನೆಲೆಯಲ್ಲಿ ಭಾರತ್ ಜೋಡೋ: ರಾಹುಲ್‌ಗೆ ಸಹೋದರಿ ಪ್ರಿಯಾಂಕಾ ಗಾಂಧಿ ಸಾಥ್ - Priyanka Gandhi Vadra
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17015229-thumbnail-3x2-lek.jpg)
ಮಧ್ಯಪ್ರದೇಶ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಬಿಜೆಪಿ ಭದ್ರನೆಲೆಯಾಗಿರುವ ಮಧ್ಯಪ್ರದೇಶ ರಾಜ್ಯದ ಬೋರ್ಗಾಂವ್‌ನಿಂದ ಇಂದು ಬೆಳಗ್ಗೆ ಪುನರಾರಂಭವಾಗಿದೆ. ಯಾತ್ರೆಯು 78ನೇ ದಿನಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗು ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ, ಪತಿ ರಾಬರ್ಟ್ ವಾದ್ರಾ ಸೇರಿದಂತೆ ಅನೇಕ ಕಾರ್ಯಕರ್ತರು, ಪಕ್ಷದ ಮುಖಂಡರು, ರೈತರು, ಮಹಿಳೆಯರು ಹೆಜ್ಜೆ ಹಾಕುತ್ತಿದ್ದಾರೆ. ಮುಂದಿನ 10 ದಿನಗಳಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಭಾರತ್ ಜೋಡೋ ಸಂಚರಿಸಲಿದೆ. ಸೆ.7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಶುರುವಾದ ಯಾತ್ರೆ ಈವರೆಗೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ಸಂಚರಿಸಿ ಇದೀಗ ಮಧ್ಯಪ್ರದೇಶದಲ್ಲಿ ಸಾಗುತ್ತಿದೆ.
Last Updated : Feb 3, 2023, 8:33 PM IST