ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಬಲೆಗೆ: ವಿಡಿಯೋ
🎬 Watch Now: Feature Video
Published : Sep 28, 2023, 7:17 AM IST
ಉಳ್ಳಾಲ: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ಬಿದ್ದಿದೆ. ಬುಧವಾರ ಸಂಜೆ ಸಮುದ್ರ ತಟದ ಸಮೀಪ ಬೀಸಿದ ಬಲೆಗೆ 75 ಕೆಜಿಯ ಮೀನು ಬಲೆಗೆ ಬಿದ್ದಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಬಲೆ ಹಾಕಿದ್ದರು.
ಈ ವರ್ಷದ ತಮ್ಮ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದು ಮೀನುಗಾರರು ಸಂತಸಪಟ್ಟಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ. ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ. ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ. ಆದರೆ ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ. ಈ ಮೀನು ವ್ಯಾಪಾರ ಮಾಡಿದ್ರೆ ಕೆಜಿಗೆ 200 ರೂ ಸಿಗುತ್ತದೆ. ಆದರೆ ಈದ್ ಹಬ್ಬ ಇರುವುದರಿಂದ ಈ ಮೀನನ್ನು ವ್ಯಾಪಾರ ಮಾಡದೇ ಮೀನುಗಾರರೇ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಕಾರವಾರ: ಮೀನುಗಾರರ ಬಲೆಗೆ ಬಿದ್ದ 48 ಸೆ.ಮೀ ಉದ್ದ, 1.2 ಕೆಜಿ ತೂಕದ ಬಂಗುಡೆ!