ಹುಬ್ಬಳ್ಳಿ: ದೇವಾಲಯಕ್ಕೆ ಹೋಗಲು ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ - VIDEO - ಅಪಘಾತದ ಸಿಸಿಟಿವಿ ವಿಡಿಯೋ
🎬 Watch Now: Feature Video
Published : Oct 24, 2023, 12:22 PM IST
ಹುಬ್ಬಳ್ಳಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಬಂದು ಬೈಕ್ ಸವಾರ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿ ಕೇಶ್ವಾಪುರ ಸರ್ಕಲ್ ಜೈನ್ ದೇವಸ್ಥಾನದ ಮುಂದೆ ನಡೆದಿದೆ. ಘಟನೆಯಲ್ಲಿ ಜೋಶನಾ ಜೈನ್ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಜೋಶನಾ ಜೈನ್ ಅವರು ಬೆಳಗ್ಗೆ ದೇವಸ್ಥಾನಕ್ಕೆ ಹೋಗಲು ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕೆಳಗೆ ಬಿದ್ದ ಮಹಿಳೆಗೆ ರಕ್ತ ಸ್ರಾವವಾಗಿದೆ. ಅಲ್ಲಿಂದ ಸ್ಥಳೀಯರು ಗಾಯಗೊಂಡ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಬಂದ ಪೂರ್ವ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ. ಬೈಕ್ ಸವಾರ ಮಹಿಳೆಗೆ ಡಿಕ್ಕಿ ಹೊಡೆದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಾಳು ಮಹಿಳೆ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಆದಿತ್ಯ ಮಲ್ಲಿಕಾರ್ಜುನ ಮತ್ತಿಕೊಪ್ಪ ಡಿಕ್ಕಿ ಹೊಡೆದ ಬೈಕ್ ಸವಾರನಾಗಿದ್ದು, ಬೈಕ್ ಹಿಂಬದಿಯಲ್ಲಿ ಓರ್ವ ಸವಾರ ಕುಳಿತಿರುವುದು ವಿಡಿಯೋದಲ್ಲಿದೆ.
ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ