ಎದುರಿಗೆ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು: ಮೊಬೈಲ್ನಲ್ಲಿ ಭೀಕರ ದೃಶ್ಯ ಸೆರೆ - etv bharat kannada
🎬 Watch Now: Feature Video
ಕೊಡಗು: ಸ್ಕೂಟಿ ಹಾಗೂ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಸುದರ್ಶನ ವೃತ್ತದ ಬಳಿ ನಡೆದಿದೆ. ಎರಡನೇ ಮೊಣ್ಣಂಗೇರಿ ನಿವಾಸಿ ಧನಂಜಯ್ (57) ಮೃತ ದುರ್ದೈವಿ. ಮಡಿಕೇರಿ ಮತ್ತು ಸಿದ್ದಾಪುರ ರಸ್ತೆಯಲ್ಲಿ ಸ್ನೇಹಿತನ ಮನೆಗೆ ಊಟಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಸುಳ್ಯದಲ್ಲಿ ವಿದ್ಯಾರ್ಥಿಗಳಿದ್ದ ಬೈಕ್ಗೆ ಕಾರು ಡಿಕ್ಕಿ; ಓರ್ವ ಬಲಿ, ಮತ್ತೋರ್ವ ಗಂಭೀರ
ಮೈಸೂರುನಿಂದ ಮಂಗಳೂರು ಕಡೆಗೆ ಹೊರಟಿದ್ದ ಗೂಡ್ಸ್ ವಾಹನದಲ್ಲಿ ಕುಳಿತ್ತಿದ್ದ ವ್ಯಕ್ತಿ ರಸ್ತೆ ತಿರುವಿನಲ್ಲಿ ದೃಶ್ಯಗಳನ್ನು ಸೆರೆ ಹಿಡಿಯುತ್ತಿರುವಾಗ ಮಡಿಕೇರಿ ಕಡೆಯಿಂದ ಬಂದ ಬೈಕ್ ಸಾವರ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸ್ಥಳಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತ ಧನಂಜಯ್ ಎರಡನೇ ಮೊಣ್ಣಂಗೇರಿ ಗ್ರಾಮದ ಪಂಚಾಯಿ ಸದಸ್ಯೆ ಪುಷ್ಪವತಿ ಎಂಬುವವರ ಪತಿಯಾಗಿದ್ದಾರೆ.
ಇದನ್ನೂ ಓದಿ:ಟೈರ್ ಸ್ಫೋಟಗೊಂಡು ಲಾರಿಗೆ ಗುದ್ದಿದ ಕಾರು: ಸ್ಥಳದಲ್ಲೇ ಆರು ಜನರ ದುರ್ಮರಣ