ರಸ್ತೆ ದಾಟುತ್ತಿದ್ದಾಗ ಸ್ಕೂಟಿಗೆ ಗುದ್ದಿದ ಬೈಕ್: ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ - ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
🎬 Watch Now: Feature Video
ಕೊಯಮತ್ತೂರು (ತಮಿಳುನಾಡು): ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಸ್ಕೂಟಿಗೆ ಎದುರುಗಡೆಯಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಸ್ಕೂಟಿಯಲ್ಲಿ ಶಾಲಾ ಬಾಲಕಿ ಮತ್ತು ಚಿಕ್ಕ ಮಗುವಿನೊಂದಿಗೆ ಮಹಿಳೆ ಸಂಚರಿಸುತ್ತಿದ್ದರು. ತಾಯಿ, ಮಕ್ಕಳು ಸೇರಿ ಐವರು ಗಾಯಗೊಂಡಿದ್ದಾರೆ.
ಇಲ್ಲಿನ ಸೋಮನೂರಿನಲ್ಲಿ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ರಸ್ತೆಯಿಂದ ಮತ್ತೊಂದು ರಸ್ತೆಗೆ ದಾಟಲು ಮುಂದಾದಾಗ ಎದುರುಗಡೆಯಿಂದ ವೇಗವಾಗಿ ಬಂದ ಕಾಲೇಜು ವಿದ್ಯಾರ್ಥಿಗಳ ಬೈಕ್ ಡಿಕ್ಕಿಯಾಗಿದೆ. ಸ್ಕೂಟಿಯಲ್ಲಿದ್ದ ಮಹಿಳೆ ಮತ್ತು ಮಕ್ಕಳು ಸ್ವಲ್ಪ ಎತ್ತರಕ್ಕೆ ಹಾರಿ ರಸ್ತೆಗೆ ಬಿದ್ದಿದ್ದಾರೆ. ಮತ್ತೊಂದೆಡೆ, ಬೈಕ್ನಲ್ಲಿದ್ದ ಇಬ್ಬರು ಯುವಕರು ಸಹ ಗಾಳಿಯಲ್ಲಿ ತೇಲಿಕೊಂಡು ನೆಲಕ್ಕಪ್ಪಳಿಸಿದ್ದಾರೆ. ಭೀಕರ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಗೂಗಲ್ ಮ್ಯಾಪ್ನಲ್ಲಿ ರಸ್ತೆ ಶೋಧಿಸುವಾಗ ಅಪಘಾತ : ಬೈಕ್‌ಗೆ ಲಾರಿ ಗುದ್ದಿ ಯುವತಿ ಸ್ಥಳದಲ್ಲೇ ಸಾವು