ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ ಗೆಲುವು - ಈಟಿವಿ ಭಾರತ ಕನ್ನಡ

🎬 Watch Now: Feature Video

thumbnail

By

Published : May 13, 2023, 7:42 PM IST

Updated : May 14, 2023, 2:50 PM IST

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಹೆಚ್​ ಸಿ ಯೋಗೇಶ್​ ವಿರುದ್ಧ 27,328 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಗೆಲುವಿನ ನಂತರ ಈಟಿವಿ ಭಾರತದೊಂದಿಗೆ ಮಾತನಾಡಿದ ಚೆನ್ನಬಸಪ್ಪ ಅವರು, ಇದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಗೆಲುವು. ಕಾರ್ಯಕರ್ತರು ಮತ್ತು ಸಂಘಟನೆಯ ಪರಿಶ್ರಮವೇ ಈ ಜಯಕ್ಕೆ ಕಾರಣ. ಇದು ಸಂಘಟನೆಗೆ ಸಮರ್ಪಿತವಾದ ಗೆಲುವಾಗಿದೆ ಎಂದು ಸಂತಸ ಹಂಚಿಕೊಂಡರು.

ಮುಂದಿನ ಎಲ್ಲ ಕಾರ್ಯಗಳ ಬಗ್ಗೆ ಚರ್ಚೆ ಮಾಡಿ ಸಾರ್ವಜನಿಕರ ಹಿತದೃಷ್ಟಿಯಿಂದ ಆಗಬೇಕಾದ ಎಲ್ಲ ಕಾರ್ಯಗಳನ್ನು ಮಾಡಲಾಗುವುದು ಎಂಬ ಭರವಸೆಯನ್ನು ಈ ಸಂದರ್ಭದಲ್ಲಿ ಕೊಡುವೆ. ಗೆಲುವು ಖುಷಿ ಕೊಟ್ಟಿದೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್​ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಗೆಲುವು ದಾಖಲಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ರಾಜ್ಯಕ್ಕೆ ಪ್ರಧಾನಿ ಮೋದಿ ಸೇರಿದಂತೆ, ಕೇಂದ್ರದ ನಾಯಕರ ರೋಡ್​ ಶೋ, ಪ್ರಚಾರದ ಹೊರತಾಗಿಯೂ ಕೇವಲ 65 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯ: 11 ಕ್ಷೇತ್ರ ಕೈ ವಶ, 8 ಸ್ಥಾನ‌ ಬಿಜೆಪಿ‌ ಮಡಿಲಿಗೆ  

Last Updated : May 14, 2023, 2:50 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.