ರಂಗೇರಿದ ಚುನಾವಣಾ ಕಣ: ಬಿಜೆಪಿಯ ಮಹಾ ಅಭಿಯಾನ.. ಅಮಿತ್ ಶಾ ಸೇರಿ 98 ಪ್ರಭಾವಿ ನಾಯಕರಿಂದ ಮತಬೇಟೆ
🎬 Watch Now: Feature Video
ಬೆಂಗಳೂರು : ರಾಜ್ಯ ಚುನಾವಣಾ ಕಣ ರಂಗೇರಿದೆ. ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ಹದಿನೈದು ದಿನಗಳು ಬಾಕಿ ಇದ್ದು, ಎಲ್ಲಾ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. ಬಿಜೆಪಿ ಮಹಾ ಅಭಿಯಾನ ಆರಂಭಿಸಿದ್ದು, 98 ಪ್ರಭಾವಿ ನಾಯಕರ ಮೂಲಕ ಪ್ರಚಾರ ನಡೆಸಲು ಮುಂದಾಗಿದೆ.
ರಾಜ್ಯದ 224 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡುತ್ತಿದ್ದು, ಈ ಎಲ್ಲ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಮತಬೇಟೆ ನಡೆಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಸ್ಮೃತಿ ಇರಾನಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಸುಮಾರು 98 ಮಂದಿ ಎಪ್ರಿಲ್ 25 ಮತ್ತು 26ರಂದು ಬಿರುಸಿನ ಪ್ರಚಾರ ನಡೆಸಲಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ ಬಿ ಜೀರಲಿ ಮಾಹಿತಿ ನೀಡಿದ್ದಾರೆ.
ಇನ್ನೊಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸತತ ಮೂರು ದಿನಗಳಿಂದ ರಾಜ್ಯದಲ್ಲಿ ಮಿಂಚಿನ ಸಂಚಾರ ನಡೆಸಿದ್ದು, ಇವರಿಗೆ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಸಾಥ್ ನೀಡಿದ್ದಾರೆ. ಜೊತೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ : ಲಿಂಗಾಯತರ ಮತ ಸೆಳೆಯಲು ಬಿಎಸ್ವೈ ಪ್ಲಾನ್: ವೀರಶೈವ ಸಮಾಜದ ಸ್ನೇಹಮಿಲನ