ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ್ಯ: ಈಶ್ವರ್ ಖಂಡ್ರೆ - debate on budget in assembly
🎬 Watch Now: Feature Video
ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಈ ಭಾಗದಲ್ಲಿ ಶಿಕ್ಷಣ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಸಾಕಷ್ಟು ಅನುದಾನ ಒದಗಿಸದೇ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್ ಶಾಸಕ ಈಶ್ವರ ಖಂಡ್ರೆ ವಿಧಾನಸಭೆಯಲ್ಲಿಂದು ಆರೋಪಿಸಿದರು. ಬಜೆಟ್ ಮೇಲಿನ ಮುಂದುವರೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನೇ ರಚನೆ ಮಾಡದೆ, ಕಳೆದ ಬಜೆಟ್ನಲ್ಲಿ ಒದಗಿಸಿದ ಹಣವನ್ನು ಸಮರ್ಪಕವಾಗಿ ಖರ್ಚು ಮಾಡಿಲ್ಲ. ಈ ಭಾಗದ 41 ವಿಧಾನಸಭಾ ಕ್ಷೇತ್ರಗಳು ತೀರಾ ಹಿಂದುಳಿದಿವೆ. ಅವುಗಳ ಅಭಿವೃದ್ಧಿಗೆ ಇಚ್ಛಾಶಕ್ತಿ ತೋರಿಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರವಿದ್ದಾಗ ಸುಮಾರು 36 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನೆಪವೊಡ್ಡಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಈ ಭಾಗದಲ್ಲಿ ಸುಮಾರು 50 ಸಾವಿರ ವಿವಿಧ ಹುದ್ದೆಗಳು ಖಾಲಿ ಇವೆ. ಆದರೂ, ಸರ್ಕಾರ ಈ ಬಗ್ಗೆ ಸರ್ಕಾರ ಗಮನ ಹರಿಸಿಲ್ಲ ಎಂದರು.
ಇದನ್ನೂ ಓದಿ: ಜೆಡಿಎಸ್ಗೆ ನೀಡುವ ಒಂದೊಂದು ಮತವೂ ಕಾಂಗ್ರೆಸ್ಗೆ ಹೋಗುತ್ತದೆ: ಅಮಿತ್ ಶಾ