ಪಕ್ಷದ ಹಿನ್ನಡೆ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ: ಬಿ ಎಸ್ ಯಡಿಯೂರಪ್ಪ - ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ

🎬 Watch Now: Feature Video

thumbnail

By

Published : May 13, 2023, 4:00 PM IST

ಬೆಂಗಳೂರು: ಬಿಜೆಪಿಗೆ ಗೆಲುವು ಮತ್ತು ಸೋಲು ಹೊಸದಲ್ಲ. ಎರಡು ಸೀಟ್​ನಿಂದ ಪಕ್ಷವನ್ನು ಕರ್ನಾಟಕದಲ್ಲಿ ಕಟ್ಟಿದ್ದೇವೆ. ಈ ಫಲಿತಾಂಶದಿಂದ ಪಕ್ಷದ ಕಾರ್ಯಕರ್ತರು ಗಾಬರಿಗೊಳ್ಳುವ ಅಗತ್ಯವಿಲ್ಲ. ಪಕ್ಷದ ಹಿನ್ನಡೆಯ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ಜನತೆ ನೀಡಿದ ಈ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇನೆ ಎಂದು ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನರೇಂದ್ರ ಮೋದಿಯವರ ಆಡಳಿತದ ಅಡಿಯಲ್ಲಿ ನಾವು ಉತ್ತಮ ಅಭಿವೃದ್ಧಿಯನ್ನು ಮಾಡಿದ್ದೇವೆ. ಆದರೂ, ಈ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆ. ಪಕ್ಷವನ್ನು ಮತ್ತೆ ಕಟ್ಟುತ್ತೇವೆ. ರಾಜ್ಯದ ಅಭಿವೃದ್ಧಿಗೆ ಅಗತ್ಯ ಬೆಂಬಲವನ್ನು ನೀಡುತ್ತೇವೆ ಎಂದು ಹೇಳಿದ್ದಾರೆ. 

ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಭರ್ಜರಿ ಪ್ರಚಾರವನ್ನು ಮಾಡಿತ್ತು ಮತ್ತು 130 ರಿಂದ 140 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿತ್ತು. ಆದರೆ ಬಿಜೆಪಿ 64 ಕ್ಷೇತ್ರಕ್ಕೆ ವೀಸಲಾಗಿದೆ. ಬೊಮ್ಮಾಯಿ ಸರ್ಕಾರದಲ್ಲಿ ಮಂತ್ರಗಳಾಗಿದ್ದವರೇ ಸೋಲುಂಡಿರುವುದು ಪಕ್ಷಕ್ಕೆ ಆದ ಮಹಾ ಆಘಾತವಾಗಿದೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಾರಿಯ ಚುನಾವಣೆಯಲ್ಲಿ ಏನೆಲ್ಲಾ ಕೊರತೆಗಳಾಗಿವೆ ಎಂಬುದರ ಬಗ್ಗೆ ಗಮನಹರಿಸಲಾಗುತ್ತದೆ. ಸಂಪೂರ್ಣ ಫಲಿತಾಂಶ ಬಂದ ನಂತರ ಈ ಬಗ್ಗೆ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ. ಈ ಫಲಿತಾಂಶವನ್ನು ಒಪ್ಪಿಕೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪುಟಿದೆದ್ದು ಬರಲಿದೆ ಎಂದು ಬಿಎಸ್​ವೈ ಭರವಸೆ ಮಾತುಗಳನ್ನಾಡಿದ್ದಾರೆ.  

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪುಟಿದೇಳಲಿದೆ: ಬಸವರಾಜ ಬೊಮ್ಮಾಯಿ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.