ಹರಪನಹಳ್ಳಿಯಲ್ಲಿ ಜೆಪಿ ನಡ್ಡಾ ಮತಬೇಟೆ, ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ - political campaign
🎬 Watch Now: Feature Video
ದಾವಣಗೆರೆ: ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಭರ್ಜರಿ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಕರುಣಾಕರ ರೆಡ್ಡಿ ಪರ ಮತಯಾಚಿಸಿದರು. ದಾವಣಗೆರೆ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಹರಪನಹಳ್ಳಿಯಲ್ಲಿರುವ ಹರಿಹರ ವೃತ್ತದಿಂದ ಆರಂಭವಾದ ರೋಡ್ ಶೋ ಐಬಿ ಸರ್ಕಲ್ ವರೆಗೆ ನಡೆಯಿತು. ರೋಡ್ ಶೋನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗಿಯಾಗಿ ಪಕ್ಷದ ಬಾವುಟ ಹಿಡಿದು ಮೋದಿ ಮೋದಿ ಎಂದು ಘೋಷಣೆ ಕೂಗಿದರು.
ಇದೇ ವೇಳೆ ರೋಡ್ ಶೋ ನಲ್ಲಿ ಭಾಷಣ ಮಾಡಿದ ಜೆ ಪಿ ನಡ್ಡಾ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರದ ಯೋಜನೆಗಳನ್ನು ನಿಲ್ಲಿಸುತ್ತಾರೆ. ಅದಕ್ಕಾಗಿ ಈ ಬಾರಿ ಬಿಜೆಪಿ ಗೆಲ್ಲಿಸಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಕರುಣಾಕರ ರೆಡ್ಡಿ ಅವರಿಗೆ ಮತ ನೀಡಿ, ಬಿಜೆಪಿ ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು. ಲಿಂಗಾಯತರು, ಒಕ್ಕಲಿಗರು ಮತ್ತು ಎಸ್ಸಿ ಎಸ್ಟಿ ಸಮುದಾಯಗಳಿಗೆ ನಮ್ಮ ಸರ್ಕಾರ ಮೀಸಲಾತಿ ಹೆಚ್ಚಿಸಿದೆ. ಕಾಂಗ್ರೆಸ್ನವನ್ನು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ನಡ್ಡಾ ಆರೋಪಿಸಿದರು.
ಇದನ್ನೂ ಓದಿ : ಬೆಳಗಾವಿ ದಕ್ಷಿಣದಲ್ಲಿ ಅಮಿತ್ ಶಾ ಮತಬೇಟೆ: ಅಭಯ ಪಾಟೀಲ ಪರ ಭರ್ಜರಿ ರೋಡ್ ಶೋ