ಹಿಂದೂ ಧರ್ಮ ಟೀಕಿಸುವವರು ತಾಕತ್ತಿದ್ದರೆ ಹಿಂದೂಗಳ ಮತ ಬೇಡ ಅನ್ನಲಿ: ಕಟೀಲ್ ಸವಾಲು
🎬 Watch Now: Feature Video
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸತೀಶ್ ಜಾರಕಿಹೊಳಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಎಂಬ ಪದ ಬೇರೆ ಅರ್ಥ ನೀಡುತ್ತದೆ ಎನ್ನುವವರು ತಾಕತ್ತಿದ್ದರೆ ಹಿಂದೂಗಳ ಮತ ಬೇಡ ಎನ್ನಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಸವಾಲು ಹಾಕಿದ್ದಾರೆ.
ಜಿಲ್ಲೆಯ ಯಮಕನಮರಡಿ ಮತಕ್ಷೇತ್ರದ ಬಸ್ಸಾಪೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಕಟೀಲ್, ಯಾರು ಹಿಂದೂ ಪದದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದಾರೋ ಅವರು ತಾಕತ್ತಿದ್ದರೆ ಹಿಂದೂ ಮತಗಳು ಬೇಡ ಎಂದು ಹೇಳಲಿ. ಹಿಂದೂ ಸಮಾಜ ಜಾಗೃತಿಯಾಗಿದೆ. ಈ ಬಾರಿ ಈ ಕ್ಷೇತ್ರದಲ್ಲಿ ಅವರು ಸ್ಪರ್ಧೆ ಮಾಡಲಾಗುವುದಿಲ್ಲ. ಬೇರೆ ಕ್ಷೇತ್ರ ಹುಡುಕಾಟ ಮಾಡುತ್ತಾರೆ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಕಟೀಲ್ ಗುಡುಗಿದರು.
ಇತ್ತೀಚಿಗೆ ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಹಿಂದೂ ಎಂಬ ಪದದ ಬಗ್ಗೆ ಮಾತನಾಡಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ : ಡಿಕೆಶಿ ಕೊತ್ವಾಲ್ ಶಿಷ್ಯ, ಜೈಲಿಗೆ ಹೋಗಿ ಬಂದವರು: ಶಾಸಕ ರೇಣುಕಾಚಾರ್ಯ