ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಲಿಂಗಾಯತ ಮತಗಳು ವಿಭಜನೆಯಾಗಲ್ಲ: ಎಂ ಆರ್ ಪಾಟೀಲ್ ವಿಶ್ವಾಸ - ಲಿಂಗಾಯತ ಮತಗಳು ವಿಭಜನೆಯಾಗಲ್ಲ
🎬 Watch Now: Feature Video
ಹುಬ್ಬಳ್ಳಿ: ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ ಇದೆ. ಸಾಕಷ್ಟು ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿಯತ್ತ ಬರುತ್ತಿದ್ದಾರೆ. ಈ ಬಾರಿ ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಬಿಜೆಪಿ ಅಭ್ಯರ್ಥಿ ಎಂ ಆರ್ ಪಾಟೀಲ್ ಹೇಳಿದರು. ಈಟಿವಿ ಭಾರತದ ಜೊತೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಕಳೆದ ಸಾಲಿನಲ್ಲಿ ನಮ್ಮ ಪಕ್ಷ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ರಸ್ತೆ, ಶಾಲೆ, ಅಂಗನವಾಡಿ ಸೇರಿದಂತೆ ಸ್ಮಾರ್ಟ್ ಕ್ಲಾಸ್ಗಳನ್ನು ಕಟ್ಟಿಸಿದ್ದೇವೆ ಇವೆಲ್ಲ ಅಂಶಗಳನ್ನು ಇಟ್ಟುಕೊಂಡು ಮತ ಕೇಳುತ್ತೇವೆ ಎಂದರು.
ನಮಗೆ ಕಾಂಗ್ರೆಸ್ ಮಾತ್ರ ಪ್ರತಿಸ್ಪರ್ಧಿ, ಎಸ್ ಐ ಚಿಕ್ಕನಗೌಡರ ನಮ್ಮ ಪಕ್ಷ ಬಿಟ್ಟು ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದರಿಂದ ನಮ್ಮ ಪಕ್ಷಕ್ಕೆ ಯಾವುದೇ ಹಾನಿ ಇಲ್ಲ. ಅದರ ಜೊತೆಗೆ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ಲಿಂಗಾಯತ ಮತಗಳು ಕೂಡ ವಿಭಜನೆ ಆಗುವುದಿಲ್ಲ. ನಮ್ಮ ಜೊತೆ ಅವರ ಸಹೋದರ ಪ್ರದೀಪ್ ಶೆಟ್ಟರ್ ಇದ್ದಾರೆ. ಈ ಬಾರಿ ಕುಂದಗೋಳ ಕ್ಷೇತ್ರದ ಜನರು ಬಿಜೆಪಿಯತ್ತ ಒಲವು ತೋರುತ್ತಿದ್ದು, ನಮ್ಮ ಗೆಲವು ನಿಶ್ಚಿತ ಎಂದರು.
ಇದನ್ನೂ ನೋಡಿ: ಹುನಗುಂದ ಕ್ಷೇತ್ರದಲ್ಲಿ ಈ ಬಾರಿ ಗೆಲುವು ನಂದೇ: ಎಸ್ ಆರ್ ನವಲಿ ಹಿರೇಮಠ