ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಬಿ ಎಸ್ ಯಡಿಯೂರಪ್ಪ ವಿಶ್ವಾಸ - ಗೃಹ ಸಚಿವ ಅಮಿತ್ ಶಾ
🎬 Watch Now: Feature Video
ಶಿವಮೊಗ್ಗ: ಈ ಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿಯನ್ನು ಹೊಂದಿದ್ದಾರೆ. ಈ ಬಾರಿ ಸ್ಪಷ್ಟ ಬಹುಮತದೊಂದಿಗೆ 140 ಕ್ಕೂ ಹೆಚ್ಚು ಕ್ಷೇತ್ರ ಗೆದ್ದು, ಸ್ವಂತ ಶಕ್ತಿ ಮೇಲೆ ಸರ್ಕಾರ ರಚಿಸಬೇಕು ಎಂಬ ತೀರ್ಮಾನ ಮಾಡಿ ಮುಂದೆ ಸಾಗುತ್ತಿದ್ದೇವೆ. ರಾಜ್ಯದ ಜನರಿಂದ ಅಭೂತಪೂರ್ವವಾಗಿ ಸ್ವಾಗತ ಸಿಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸೂಡಾ ಅಧ್ಯಕ್ಷ ನಾಗರಾಜ್, ಮಾಜಿ ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಮೇಯರ್ ಶಿವಕುಮಾರ್, ಮಾಜಿ ಮೇಯರ್ ಸುನೀತಾ ಅಣ್ಣಪ್ಪ, ಪಾಲಿಕೆ ಸದಸ್ಯ ಚನ್ನಬಸಪ್ಪ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ:'ಜೀವಂತ ಇದ್ದಾಗಲೇ ಬಿಜೆಪಿಗೆ ಸೇರಿಸೋಲ್ಲ': ಸತ್ರೂ ಬಿಜೆಪಿ ಸೇರಲ್ಲ ಎಂದ ಸಿದ್ದರಾಮಯ್ಯಗೆ ಈಶ್ವರಪ್ಪ ತಿರುಗೇಟು