ಶಿಕ್ಷಕರ ಪ್ರತಿಭಟನೆ ಬೆಂಬಲಿಸಿ ಹೋರಾಟ.. ಭಾರತೀಯ ಯುವ ಮೋರ್ಚಾ ಕಾರ್ಯಕರ್ತರು ವಶಕ್ಕೆ - teachers protest in telangana
🎬 Watch Now: Feature Video
ಹೈದರಾಬಾದ್: ತೆಲಂಗಾಣ ಸರ್ಕಾರ ಜಾರಿಗೆ ತಂದಿರುವ ಜಿಓ 317 ವಿರೋಧಿಸಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಶಿಕ್ಷಕರನ್ನು ಬೆಂಬಲಿಸಿ ಭಾರತೀಯ ಯುವ ಮೋರ್ಚಾ ಕಾರ್ಯಕರ್ತರು ಬಿಜೆಪಿ ತೆಲಂಗಾಣ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೂ ಮುನ್ನ ಜಿಒ 317 ಅನ್ನು ರದ್ದುಗೊಳಿಸುವಂತೆ ಅಥವಾ ತಿದ್ದುಪಡಿ ಮಾಡುವಂತೆ ಒತ್ತಾಯಿಸಿ ಪ್ರಗತಿ ಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದ ಹಲವಾರು ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಜಿಒ 317 ನಿಯಮದ ಪ್ರಕಾರ ತಮ್ಮ ತಮ್ಮ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರನ್ನು ಬೇರೊಂದು ಜಿಲ್ಲೆಗೆ ವರ್ಗಾವಣೆ ಮಾಡುವುದು ಇದರ ಉದ್ದೇಶವಾಗಿದ್ದು, ಇದಕ್ಕೆ ಶಿಕ್ಷಕರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಅಲ್ಲದೇ ತಮ್ಮ ಹುಟ್ಟೂರಿನಲ್ಲಿ ಕೆಲಸ ಮಾಡುತ್ತಿರುವವರನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡುವುದರಿಂದ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಸಂಸಾರದ ನಿರ್ವಹಣೆಗೆ ತೊಂದರೆ ಉಂಟಾಗುತ್ತದೆ ಎಂದು ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ: ಗೋವಾ ಸರ್ಕಾರದಿಂದ ಮಹದಾಯಿ ಡಿಪಿಆರ್ ತಡೆಯುವ ನಿರ್ಣಯಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಸಿಎಂ ಬೊಮ್ಮಾಯಿ