ನಡುರಸ್ತೆಯಲ್ಲೇ ಧಗ ಧಗನೆ ಹೊತ್ತಿ ಉರಿದ ಐಷಾರಾಮಿ ಬಿಎಂಡಬ್ಲ್ಯು ಕಾರು: ವಿಡಿಯೋ ವೈರಲ್ - ಬಿಎಂಡಬ್ಲ್ಯು ಕಾರು
🎬 Watch Now: Feature Video
ಚೆನ್ನೈ(ತಮಿಳುನಾಡು): ಐಷಾರಾಮಿ ಬಿಎಂಡಬ್ಲ್ಯು ಕಾರು ನಡುರಸ್ತೆಯಲ್ಲೇ ಬೆಂಕಿಗಾಹುತಿಯಾದ ಘಟನೆ ಚೆನ್ನೈನಲ್ಲಿ ನಡೆದಿದೆ. ಚೆನ್ನೈನ ಕ್ರೋಂಪೇಟ್ ಬಳಿ ರಸ್ತೆಯಲ್ಲಿ ಅರುಣ್ ಬಾಲಾಜಿ ಎಂಬುವರಿಗೆ ಸೇರಿದ ಬಿಎಂಡಬ್ಲ್ಯು ಐಷಾರಾಮಿ ಕಾರು ಹೊತ್ತಿ ಉರಿದಿದೆ. ತಿರುವಲ್ಲಿಕೇಣಿಯಿಂದ ತಾಂಬರಂಗೆ ತೆರಳುತ್ತಿದ್ದಾಗ ಕಾರಿನ ಮುಂಭಾಗದಿಂದ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ಬೆಂಕಿಯನ್ನು ಗಮನಿಸಿದ ಚಾಲಕ ಪಾರ್ಥಸಾರಥಿ ಕಾರನ್ನು ನಡುರಸ್ತೆಯಲ್ಲೇ ನಿಲ್ಲಿಸಿ, ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೂಡಲೇ ಅಲ್ಲಿದ್ದ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಅಲ್ಲಿಗೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಅಷ್ಟರಲ್ಲಾಗಲೇ ಭಾಗಶಃ ಸುಟ್ಟು ಹೋಗಿತ್ತು. ಘಟನೆ ನಡೆದ ರಸ್ತೆಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತಾಂಬರಂ ಪೊಲೀಸರು ಕಾರಿನಲ್ಲಿ ಬೆಂಕಿ ಹೊತ್ತಿಕೊಳ್ಳಲು ಏನು ಕಾರಣ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಹೆಚ್ಚು ವಾಹನ ದಟ್ಟಣೆಯಿರು ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಇದನ್ನೂ ಓದಿ: ಸೀಟಿಗಾಗಿ ಮಹಿಳೆಯರ ಕಿತ್ತಾಟ; ಜಗಳ ಬಿಡಿಸಲಾಗದೇ ಪೊಲೀಸ್ ಠಾಣೆಗೆ ಬಸ್ ಚಲಾಯಿಸಿದ ಚಾಲಕ- ವಿಡಿಯೋ