ಆನೆ ಮೇಲೆ ಪ್ರಚಾರಕ್ಕೆ ಬಂದ ಬಿಎಸ್ಪಿ ಅಭ್ಯರ್ಥಿ: ವಿಡಿಯೋ - ಚಾಮರಾಜನಗರ ಬಿಎಸ್ಪಿ ಅಭ್ಯರ್ಥಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/640-480-18375476-thumbnail-16x9-new.jpg)
ಚಾಮರಾಜನಗರ: ರಾಜ್ಯದಲ್ಲಿ ಚುನಾವಣಾ ಕಣ ದಿನೇದಿನೆ ರಂಗೇರುತ್ತಿದ್ದು, ಅಭ್ಯರ್ಥಿಗಳು ವಿಭಿನ್ನ ರೀತಿಯಲ್ಲಿ ಪ್ರಚಾರಕ್ಕಿಳಿದಿದ್ದಾರೆ. ಅಭ್ಯರ್ಥಿಗಳ ಕುಟುಂಬಸ್ಥರು ಅಖಾಡಕ್ಕೆ ಇಳಿದು ಮನೆ-ಮನೆಗೆ ಭೇಟಿ ನೀಡಿ ಮತಯಾಚಿಸುತ್ತಿದ್ದಾರೆ. ಇತ್ತ ಚಾಮರಾಜನಗರ ಬಿಎಸ್ಪಿ ಅಭ್ಯರ್ಥಿ ಒಂದು ಹೆಜ್ಜೆ ಮುಂದೆ ಹೋಗಿ ಆನೆ ಸವಾರಿ ಮಾಡುತ್ತಿದ್ದಾರೆ. ಅಭ್ಯರ್ಥಿ ಹ.ರಾ ಮಹೇಶ್ ಆನೆ ಮಾದರಿ ಪ್ರಚಾರ ರಥವನ್ನು ನಿರ್ಮಾಣ ಮಾಡಿಸಿಕೊಂಡು ಅದರ ಮೇಲೆ ಕುಳಿತು ವಿಭಿನ್ನವಾಗಿ ಮತ ಬೇಟೆ ನಡೆಸುತ್ತಿದ್ದಾರೆ.
ಹ.ರಾ ಮಹೇಶ್ 15 ಅಡಿ ಎತ್ತರದ ಕೃತಕ ಆನೆ ಮೇಲೆ ಕುಳಿತು ಮತಬೇಟೆ ನಡೆಸುತ್ತಿದ್ದಾರೆ. ಹಳ್ಳಿ-ಹಳ್ಳಿಗಳಿಗೆ ಆನೆ ಪ್ರಚಾರ ರಥ ಲಗ್ಗೆ ಇಡುತ್ತಿದೆ. ಪ್ರಬಲ ಅಭ್ಯರ್ಥಿಗಳು ಸ್ಪರ್ಧಿಸಿರುವ ಚಾಮರಾಜನಗರದಲ್ಲಿ ಬಿಎಸ್ಪಿ ಅಭ್ಯರ್ಥಿ ಗಮನ ಸೆಳೆಯುತ್ತಿದ್ದಾರೆ.
ಮೂವರ ವಿರುದ್ಧ ಕೇಸ್: ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಅವರಿಗೆ ನಾಮಪತ್ರ ವಾಪಸ್ ಪಡೆಯುವಂತೆ ಆಮಿಷ ಒಡ್ಡಿದ್ದರು ಎಂದು ಆಡಿಯೋ ವೈರಲ್ ಆದ ಹಿನ್ನೆಲೆ ಮೂವರು ಅಪರಿಚಿತರ ವಿರುದ್ಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮಣ್ಣ, ನಟರಾಜು, ಸುದೀಪ್ ಎಂದು ಆಡಿಯೋದಲ್ಲಿ ಉಲ್ಲೇಖಗೊಂಡ ಮೂವರು ಹೆಸರುಗಳ ಮೇಲೆ ಅಪರಿಚಿತರು ಎಂದು ನಮೂದಿಸಿ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗಾನಂದ ಮೌಖಿಕ ಆದೇಶದ ಮೇರೆಗೆ ಜಯಣ್ಣ ಎಂಬವರು ದೂರು ಕೊಟ್ಟಿದ್ದರು.
ಇದನ್ನೂ ಓದಿ: ಚಾಮರಾಜನಗರ ಬಿಜೆಪಿ ಮುಖಂಡ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ: ಸೋಮಣ್ಣ ಮತ ಬ್ಯಾಂಕಿಗೆ ಕನ್ನ