Watch: ನಿಂತಿದ್ದ ರಿಕ್ಷಾಗೆ ಡಿಕ್ಕಿ ಹೊಡೆದ ಸಾರಿಗೆ ಬಸ್.. ಓರ್ವ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ: ವಿಡಿಯೋ - ಇರುಮುಡಿ ಮೂರ್ತಿ
🎬 Watch Now: Feature Video

ಹಾಸನ: ರಸ್ತೆ ಬದಿ ನಿಂತಿದ್ದ ರಿಕ್ಷಾಗೆ ವೇಗವಾಗಿ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದು ಓರ್ವ ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಇರುಮುಡಿ ಮೂರ್ತಿ (54) ಎಂಬ ವ್ಯಕ್ತಿ ಸಾವನ್ನಪ್ಪಿದ್ದು, ರಿಕ್ಷಾ ಚಾಲಕ ಮತ್ತು ಮತ್ತೋರ್ವ ಚಿಕಿತ್ಸೆ ಪಡೆಯುತ್ತಿದ್ದು ಸ್ಥಿತಿ ಚಿಂತಾಜನಕವಾಗಿದೆ. ಹಾಸನ - ಬೆಂಗಳೂರು ನಾನ್ ಸ್ಟಾಪ್ ಬಸ್ ಬೆಂಗಳೂರಿಂದ ಹಾಸನಕ್ಕೆ ಬರುತ್ತಿತ್ತು. ಈ ವೇಳೆ, ಹಾಸನದಲ್ಲಿ ರಸ್ತೆ ಬದಿ ನಿಲ್ಲಿಸಿದ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ರಿಕ್ಷಾ 3 ಸುತ್ತು ಸುತ್ತಿ ಕೆಳಕ್ಕುರುಳಿದೆ.
ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿ, ಚಾಲಕ ಆನಂದ್ ಮತ್ತು ಪ್ರಯಾಣಿಕ ಬೆಟ್ಟೇಗೌಡ ಗಂಭೀರ ಗಾಯಗೊಂಡರು. ಘಟನೆಗೆ ಮುಂದೆ ಹೋಗುತ್ತಿದ್ದ ಮತ್ತೊಂದು ಸಾರಿಗೆ ಬಸ್ ಅನ್ನು ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಸಾರಿಗೆ ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: Double Murder: ಇಬ್ಬರು ವೃದ್ಧ ವ್ಯಕ್ತಿಗಳನ್ನು ಹೊಡೆದು ಕೊಂದ ಮಾನಸಿಕ ಅಸ್ವಸ್ಥ; ಹೆದ್ದಾರಿಯಲ್ಲಿ ಶವ ಎಳೆದೊಯ್ದು ಕ್ರೌರ್ಯ!