ಹಾಸನ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಸರ್ಕಾರಿ ಬಸ್ - ಅರಸೀಕೆರೆ ಗ್ರಾಮಾಂತರ ಠಾಣಾ ಪೊಲೀಸರು
🎬 Watch Now: Feature Video
Published : Oct 16, 2023, 4:17 PM IST
ಹಾಸನ : ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಮನೆಗೆ ನುಗ್ಗಿದ್ದು, ಬಸ್ ಮತ್ತು ಮನೆ ಜಖಂಗೊಂಡಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದ ಬಳಿ ಘಟನೆ ನಡೆದಿದೆ. ಅರಸೀಕೆರೆ ಮಾರ್ಗವಾಗಿ ಹುಳಿಯಾರಿಗೆ ತೆರಳುತ್ತಿದ್ದ ಅಗ್ಗುಂದ ಗ್ರಾಮದ ಕಲ್ಲೇಶ್ ಎಂಬವರ ಮನೆಗೆ ನುಗ್ಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಅರಸೀಕೆರೆ ಗ್ರಾಮಾಂತರ ಪೊಲೀಸರು: ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅರಸೀಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಬಸ್ ಗುದ್ದಿದ ಪರಿಣಾಮ ಮನೆ ಗೋಡೆ ನೆಲಕ್ಕೆ ಉರುಳಿದ್ದು, ಮುಂಭಾಗದ ಕಾಂಪೌಂಡ್ ಸಂಪೂರ್ಣ ಬಿದ್ದು ಹೋಗಿದೆ. ವಾಸದ ಮನೆಯಾಗಿದ್ದರಿಂದ ಹಾನಿಯಾದ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಅದೃಷ್ಟವಶಾತ್ ಬಸ್ ಮನೆಗೆ ನುಗ್ಗಿದ್ದರಿಂದ ಅಲ್ಲಿದ್ದ ಯಾರಿಗೂ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ.
ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕೆಎಸ್ಆರ್ಟಿಸಿ ಬಸ್: 28 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು