ಚಿಕ್ಕಮಗಳೂರು: ಅಯ್ಯಪ್ಪ ಭಕ್ತರಿದ್ದ ಬಸ್ ಪಲ್ಟಿ, 15 ಜನರಿಗೆ ಗಾಯ - ಚಿಕ್ಕಮಗಳೂರು ಬಸ್ ಪಲ್ಟಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/08-01-2024/640-480-20454671-thumbnail-16x9-vny.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Jan 8, 2024, 7:10 AM IST
ಚಿಕ್ಕಮಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಸಂಚರಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ ಗುಡ್ಡೆ ತೋಟ ಬಳಿ ಅಪಘಾತ ಸಂಭವಿಸಿತು.
ಮೈಸೂರು ಮೂಲದ ಈ ಬಸ್‌ನಲ್ಲಿ ಅಯ್ಯಪ್ಪ ಸ್ವಾಮಿ ದರ್ಶನ ಮಾಡಿ ಬಂದಿದ್ದ ಮಾಲಾಧಾರಿಗಳು, ಶೃಂಗೇರಿ ಶಾರದಾಂಬೆಯ ದರ್ಶನ ಪಡೆದು ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಹೊರಟಿದ್ದರು. ಬಸ್ ಜಯಪುರದಿಂದ ಗುಡ್ಡೆ ತೋಟದ ಮೂಲಕ ಹೊರನಾಡಿಗೆ ಹೋಗುತ್ತಿದ್ದಾಗ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ.
34 ಮಂದಿ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದರು. ಇವರಲ್ಲಿ ಹದಿನೈದು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ತಿರುವಿನಲ್ಲಿ ಘಟನೆ ನಡೆದಿದ್ದರಿಂದ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಜಯಪುರ ಪೊಲೀಸರು ಕ್ರೇನ್ ಮೂಲಕ ಬಸ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರು: ಆಂಬ್ಯುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ, 10 ದಿನದಲ್ಲಿ ಮೂರನೇ ಪ್ರಕರಣ