'ಭ್ರಷ್ಟಾಚಾರದ ಕೂಸು ಹುಟ್ಟಿಸಿದ್ದು ಕಾಂಗ್ರೆಸ್, ಅವ್ರಿಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ' - Etv Bharat Kannada
🎬 Watch Now: Feature Video
ಮಹದೇವಪುರ (ಬೆಂಗಳೂರು): "ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದೂ ಅಷ್ಟೇ ಸತ್ಯ. ಯಾವುದೇ ದುಷ್ಟಶಕ್ತಿಯೂ ಇದನ್ನು ತಡೆಯಲು ಸಾಧ್ಯವಿಲ್ಲ" ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು. 2014 ರವರೆಗೆ 10 ವರ್ಷ ಆಡಳಿತ ನಡೆಸಿದ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ದೇಶವನ್ನು ಭ್ರಷ್ಟಾಚಾರದ ಸುಳಿಗೆ ಸಿಲುಕಿಸಿತ್ತು. ಸಾವಿರಾರು ಕೋಟಿ ರೂಪಾಯಿ ಮೊತ್ತದ ಭ್ರಷ್ಟಾಚಾರ ನಡೆದಿತ್ತು. ಭ್ರಷ್ಟಾಚಾರದ ಕೂಸು ಹುಟ್ಟಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಈಗ ಕಾಂಗ್ರೆಸ್‌ನವರು ಭ್ರಷ್ಟಾಚಾರದ ಬಗ್ಗೆ ಬೊಬ್ಬೆ ಹೊಡೆಯುತ್ತಿದ್ದಾರೆ. ಅವರಿಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕಾಂಗ್ರೆಸ್ ಸುಳ್ಳು ಆರೋಪಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ" ಎಂದರು.
"ದೇಶದ ಅಭಿವೃದ್ಧಿಯ ಪಯಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು. ದೇಶದ ಮೊದಲ ಪ್ರಜೆಯೇ ಇವತ್ತು ಮಹಿಳೆ. ದೇಶಕ್ಕೆ ಹಲವು ವರ್ಷಗಳಿಂದ ಬಜೆಟ್ ಕೊಟ್ಟವರು ನಿರ್ಮಲಾ ಸೀತಾರಾಮನ್ ಎನ್ನಲು ಹೆಮ್ಮೆಯಾಗುತ್ತದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸಿ ಮೋದಿಯವರ ಕೈ ಬಲಪಡಿಸಬೇಕು" ಎಂದು ಅವರು ಮನವಿ ಮಾಡಿದರು.
ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಕರ್ನಾಟಕದ ಸಂಕಲ್ಪ ಮಾಡಿ: ಅಣ್ಣಾಮಲೈ