ಅವರಷ್ಟು ಸಾಮರ್ಥ್ಯವಿಲ್ಲ: ಹೆಚ್ಡಿಕೆ ಟ್ವೀಟ್ಗೆ ಸಿ ಟಿ ರವಿ ಟಾಂಗ್ - ಶಾಸಕ ಸಿ ಟಿ ರವಿ
🎬 Watch Now: Feature Video

ಚಿಕ್ಕಮಗಳೂರು: ರಾಜ್ಯ ಬಿಜೆಪಿ ನಪುಂಸಕ ಸರ್ಕಾರ ಎಂಬ ಹೆಚ್ಡಿಕೆ ಟ್ವೀಟ್ಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಚಿಕ್ಕಮಗಳೂರಿನಲ್ಲಿ ಟಾಂಗ್ ನೀಡಿದ್ದಾರೆ. ಅವರಷ್ಟು ಸಾಮರ್ಥ್ಯವಿಲ್ಲ ಎಂದು ನಾವು ಮೊದಲೇ ಒಪ್ಪಿಕೊಂಡಿದ್ದೇವೆ. ನಮ್ಮದು ಮನೆಯೊಳಗಿನ ಸಾಮರ್ಥ್ಯ, ಅವರದ್ದು ಮನೆ - ಊರು ದಾಟಿದ ಸಾಮರ್ಥ್ಯ. ನಮಗೆ ಅಷ್ಟು ಸಾಮರ್ಥ್ಯ ಇಲ್ಲ. ಅವರು ವೈಯಕ್ತಿಕವಾಗಿ ಹೇಳಿದ್ದಾರೋ ಅಥವಾ ರಾಜಕೀಯವಾಗಿ ಹೇಳಿದ್ದಾರೋ ಗೊತ್ತಿಲ್ಲ. ರಾಜಕೀಯವಾಗಿ ಹೇಳಿದ್ದರೆ ಬಿಜೆಪಿ ತನ್ನ ಸಾಮರ್ಥ್ಯವನ್ನ ಸಾಬೀತು ಮಾಡುತ್ತಲೇ ಬಂದಿದೆ ಎಂದು ಹೇಳಿದರು.
ಸಿಎಂ ಆಗಿದ್ದಾಗ ಜೆಡಿಎಸ್ ಭದ್ರಕೋಟೆಯಲ್ಲೇ ನೂರಾರು ಕೋಟಿ ಖರ್ಚು ಮಾಡಿ ಮಗನನ್ನ ಗೆಲ್ಲಿಸಲು ಆಗಲಿಲ್ಲ. ದೇವೇಗೌಡರು ಹಿರಿಯರು, ಅವರ ಬಗ್ಗೆ ಗೌರವವಿದೆ. ಇಳಿ ವಯಸ್ಸಿನಲ್ಲಿ ಕಾಂಗ್ರೆಸ್ - ಜೆಡಿಎಸ್ ಸೇರಿ ಗೆಲ್ಲಿಸಲು ಆಗಲಿಲ್ಲ. ಏನು ಹೇಳಬೇಕು. ವೈಯಕ್ತಿಕವಾಗಿ ಹೇಳಿದ್ದರೆ ಅವರಷ್ಟು ಸಾಮರ್ಥ್ಯವಿಲ್ಲ ಎಂದು ಒಪ್ಪಿಕೊಂಡಿದ್ದೇವೆ. ರಾಜಕೀಯವಾಗಿ ಹೇಳಿದ್ದರೆ, ಬಿಜೆಪಿ 25 ಪ್ಲಸ್ 1 26 ಸೀಟು ಗೆಲ್ಲುವ ಮೂಲಕ ತನ್ನ ಸಾಮರ್ಥ್ಯವನ್ನ ತೋರಿಸಿದೆ. ನಮ್ಮದು ಸೀಮಿತ ಚೌಕಟ್ಟಿನ ಸಾಮರ್ಥ್ಯ. ಅವರ ಸಾಮರ್ಥ್ಯಕ್ಕೆ ನಾವು ಶರಣು ಶರಣಾರ್ಥಿ ಎಂದು ಚಿಕ್ಕಮಗಳೂರಿನಲ್ಲಿ ಶಾಸಕ ಸಿ ಟಿ ರವಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಬ್ರಾಹ್ಮಣ ಸಮುದಾಯವೂ ಸೇರಿ ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ: ಹೆಚ್ಡಿಕೆ ಸ್ಪಷ್ಟನೆ