ಹುಬ್ಬಳ್ಳಿ- ಗದಗ ಹೆದ್ದಾರಿಯಲ್ಲಿ ಬೈಕ್ ಕಾರು ಭೀಕರ ಅಪಘಾತ.. ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ - ಈಟಿವಿ ಭಾರತ ಕನ್ನಡ
🎬 Watch Now: Feature Video
ಹುಬ್ಬಳ್ಳಿ : ಹುಬ್ಬಳ್ಳಿ - ಗದಗ ರಾಷ್ಟ್ರೀಯ ಹೆದ್ದಾರಿಯಲ್ಲಿನ ನಲವಡಿ ಬಸ್ ನಿಲ್ದಾಣದ ಹತ್ತಿರ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಶನಿವಾರ ಸಂಜೆ ಗದಗ ಕಡೆಯಿಂದ ಅತಿ ವೇಗವಾಗಿ ಬರುತ್ತಿದ್ದ ಕಾರೊಂದು ಬಸ್ ನಿಲ್ದಾಣದ ಹತ್ತಿರ ರಸ್ತೆ ದಾಟುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು, ಡಿಕ್ಕಿ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಛಿದ್ರ ಛಿದ್ರವಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 3, 2023, 8:32 PM IST