ತುಮಕೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪಾರು - ಕಾರು
🎬 Watch Now: Feature Video
Published : Jan 5, 2024, 3:14 PM IST
ತುಮಕೂರು: ಸಂಚರಿಸುತ್ತಿದ್ದಾಗ ದಿಢೀರ್ ಬೆಂಕಿ ಕಾಣಿಸಿಕೊಂಡು ಕಾರು ಧಗಧಗನೆ ಹೊತ್ತಿ ಉರಿದ ಘಟನೆ ಗುಬ್ಬಿ ತಾಲೂಕಿನ ಹೊಸಪಾಳ್ಯ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ.
ಗುಬ್ಬಿಯಿಂದ ತುಮಕೂರು ಕಡೆಗೆ ಹೊರಟಿದ್ದ ಹೋಂಡಾ ಐಕಾನ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹಾಸನದಲ್ಲಿ ಸಾರಿಗೆ ಬಸ್ ಪಲ್ಟಿ: 10ಕ್ಕೂ ಹೆಚ್ಚು ಮಂದಿಗೆ ಗಾಯ
ಕಳೆದ ಡಿಸೆಂಬರ್ ತಿಂಗಳಲ್ಲಿ ಮಾರುತಿ ಕಾರಿಗೆ ಬೆಂಕಿ ತಗುಲಿ ಚಾಲಕ ಸಜೀವ ದಹನವಾದ ಘಟನೆ ನೆಲಮಂಗಲದ ಟೋಲ್ ಬಳಿ ಇರುವ ಪಾರ್ಲೆ ಜಿ ಬಿಸ್ಕೆಟ್ ಫ್ಯಾಕ್ಟರಿ ಬಳಿ ನಡೆದಿತ್ತು. ಇಂಥ ಘಟನೆಗಳಿಗೆ ಎಂಜಿನ್ ದೋಷ ಕಾರಣವೇ ಎಂಬುದು ಖಚಿತವಾಗಿಲ್ಲ. ಈ ಹಿಂದೆ ಎಲೆಕ್ಟ್ರಿಕ್ ಕಾರುಗಳಲ್ಲಿ ಈ ರೀತಿಯ ದೋಷಗಳು ಕಂಡುಬಂದು ಬೆಂಕಿ ಹೊತ್ತಿಕೊಂಡಿದ್ದ ಘಟನೆಗಳು ನಡೆದಿದ್ದವು.