ಕಾವೇರಿ: ಚಾಮರಾಜನಗರದಲ್ಲಿ ಕಿವಿಗೆ ಹೂ ಇಟ್ಟುಕೊಂಡು ಪ್ರತಿಭಟನೆ, ರಸ್ತೆ ತಡೆ - ETV Bharat Kannada News
🎬 Watch Now: Feature Video
Published : Oct 4, 2023, 5:38 PM IST
ಚಾಮರಾಜನಗರ : ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದಕ್ಕೆ ಚಾಮರಾಜನಗರದಲ್ಲಿ ಕಳೆದ 28 ದಿನಗಳಿಂದಲೂ ನಿರಂತರ ಪ್ರತಿಭಟನೆ ನಡೆಸಲಾಗುತ್ತಿದೆ. ಇಂದು ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸ ಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕಿವಿಗೆ ಚೆಂಡು ಹೂ ಇಟ್ಟುಕೊಂಡು ರಸ್ತೆ ತಡೆ ನಡೆಸಿದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್ನ ಅವೈಜ್ಞಾನಿಕ ತೀರ್ಪು ಕನ್ನಡಿಗರ ಕಿವಿಗೆ ಹೂ ಮುಡಿಸಿದೆ. ಕರ್ನಾಟಕ ಸರ್ಕಾರ ನಿರಂತರವಾಗಿ ನೀರು ಹರಿಸುವ ಮೂಲಕ ರೈತರು, ಜನರ ಕಿವಿಗೆ ಹೂ ಮುಡಿಸಿದೆ ಎಂದು ಚಾ.ರಂ.ಶ್ರೀನಿವಾಸ ಗೌಡ ವಾಗ್ದಾಳಿ ನಡೆಸಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ತಮಿಳುನಾಡಿನ ಸಿಎಂ ಸ್ಟಾಲಿನ್ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
ಇದನ್ನೂ ಓದಿ: ಕಿವಿ, ಬಾಯಿ, ಕಣ್ಣು ಮುಚ್ಚಿ ಕಾವೇರಿಗಾಗಿ ಪ್ರತಿಭಟನೆ; ಹೊಸ ಮದ್ಯದಂಗಡಿ ತೆರೆಯುವುದು ಬೇಡವೆಂದು SDPI ಆಕ್ರೋಶ