ಕಾವೇರಿ ಕಿಚ್ಚು: ಚಾಮರಾಜನಗರ ರೈತರಿಂದ ಹೆದ್ದಾರಿ ತಡೆ, ಹಲವರು ಪೊಲೀಸ್‌ ವಶಕ್ಕೆ

🎬 Watch Now: Feature Video

thumbnail

By

Published : Aug 17, 2023, 7:41 PM IST

ಚಾಮರಾಜನಗರ : ಕಾವೇರಿಯಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಟ್ಟಿರುವುದನ್ನು ಖಂಡಿಸಿ‌, ಕೂಡಲೇ‌ ಹೊರಹರಿವು ನಿಲ್ಲಿಸುವಂತೆ ಆಗ್ರಹಿಸಿ ಕನ್ನಡಪರ, ರೈತ ಸಂಘಟನೆಗಳು ಇಂದು ಪ್ರತ್ಯೇಕ ಪ್ರತಿಭಟನೆ ನಡೆಸಿದವು. ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಚಾಮರಾಜನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ಒಂದು ತಾಸಿಗೂ ಹೆಚ್ಚು ಕಾಲ ತಡೆದರು.

ಕಾವೇರಿ ನೀರನ್ನು ನಿಲ್ಲಿಸುವವರೆಗೆ ರಸ್ತೆ ಬಿಟ್ಟು ಕದಲುವುದಿಲ್ಲ ಎಂದು ರೈತರು ಪಟ್ಟು ಹಿಡಿದರು. ಈ ವೇಳೆ, ಚಾಮರಾಜನಗರ ಪೊಲೀಸರು 20ಕ್ಕೂ ಹೆಚ್ಚು ರೈತ ಹೋರಾಟಗಾರರನ್ನು ವಶಕ್ಕೆ ಪಡೆದು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿತ್ತು.

ಕಪ್ಪು ಬಾವುಟ ಪ್ರದರ್ಶನ: ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸೇರಿ ರಾಷ್ಟ್ರೀಯ ಹೆದ್ದಾರಿ ತಡೆದು, ಸರ್ಕಾರದ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ತೀವ್ರ ಆಸಮಾಧಾನ ವ್ಯಕ್ತಪಡಿಸಿದರು. ರಾಜಕೀಯ ಅಸ್ತಿತ್ವಕ್ಕಾಗಿ ತಮಿಳುನಾಡು ಸಿಎಂ ಸ್ಟಾಲಿನ್ ಕಾವೇರಿ ನೀರು ಕುರಿತು ತಗಾದೆ ತೆಗೆದಿದ್ದಾರೆ. ನಮ್ಮ ರಾಜ್ಯಕ್ಕೆ ನೀರಿಲ್ಲ. ಹೀಗಿದ್ದರೂ ಇಲ್ಲಿನ ಸರ್ಕಾರ ನೀರು ಬಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.