Cauvery Water: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
🎬 Watch Now: Feature Video
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ಖಂಡಿಸಿ ಮದ್ದೂರು ಪಟ್ಟಣದ ಪ್ರವಾಸಿ ಮಂದಿರದ ವೃತ್ತದಲ್ಲಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಲ ಹೊತ್ತು ರಸ್ತೆ ತಡೆ ನಡೆಸಿದ ರೈತರು, ರಾಜ್ಯ ಸರ್ಕಾರದ ಹಾಗೂ ಕಾವೇರಿ ನ್ಯಾಯ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
''ಕರ್ನಾಟಕ ರಾಜ್ಯದಿಂದ ತಮಿಳುನಾಡಿಗೆ 80,000 ಕ್ಯೂಸೆಕ್ ನೀರು ಹಂಚಿಕೆ ಮಾಡಲಾಗಿದೆ. ಈಗಾಗಲೇ ತಮಿಳುನಾಡು ಪಾಲಿನ ನೀರನ್ನು ಹಂಚಿಕೆ ಮಾಡಲಾಗಿದೆ. ಆದ್ರೂ ಕೂಡಾ ತಮಿಳುನಾಡು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದೆ. ಇದರ ಬೆನ್ನಲ್ಲೇ ಮತ್ತೆ ಹನ್ನೊಂದು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹಂಚಲಾಗಿದೆ. ರಾಜ್ಯದ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಕಾಲುವೆಗಳಿಗೆ ಕೇವಲ ಎರಡು ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಈ ನೀರು ಇನ್ನೂ ಆಯಾ ನಾಲೆಗಳಿಗೆ ತಲುಪಿಲ್ಲ. ರಾಜ್ಯ ಸರ್ಕಾರ ಈ ಕೂಡಲೇ ತಮಿಳನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕು'' ಎಂದು ರೈತ ಮುಖಂಡರು ಒತ್ತಾಯಿಸಿದರು.
ಇದನ್ನೂ ಓದಿ: Bommai: ತಮಿಳುನಾಡು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿದ ತಕ್ಷಣ ಕಾವೇರಿ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ- ಬೊಮ್ಮಾಯಿ