ನಿಯಂತ್ರಣ ತಪ್ಪಿ ಬೈಕ್ಗೆ ಗುದ್ದಿದ ಕಾರು; ಸ್ಥಳದಲ್ಲೇ ಮೃತಪಟ್ಟ ಸವಾರ - ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ - Paramati Police
🎬 Watch Now: Feature Video
Published : Sep 13, 2023, 7:55 PM IST
ನಾಮಕ್ಕಲ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬೈಕ್ಗೆ ಗುದ್ದಿದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿಲ್ಲೈಪುರಂ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಜ್ಞಾನಶೇಖರನ್ ಎಂದು ಗುರುತಿಸಲಾಗಿದೆ.
ನಿನ್ನೆ (ಸೆಪ್ಟೆಂಬರ್ 12) ಕೀರಂಪುರ್ ಟೋಲ್ ಪ್ಲಾಜಾದ ಬಳಿ ತನ್ನ ದ್ವಿಚಕ್ರ ವಾಹನದಲ್ಲಿ ದುರ್ದೈವಿ ಸಂಚರಿಸುತ್ತಿದ್ದರು. ಈ ವೇಳೆ ಇದೇ ಮಾರ್ಗವಾಗಿ (ಕರೂರಿನಿಂದ ಸೇಲಂ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ) ಕಾರೊಂದು ವಿರುದ್ಧ ಧಿಕ್ಕಿನಲ್ಲಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಅಲ್ಲದೇ ಸಾಕಷ್ಟು ಬಾರಿ ಪಲ್ಟಿ ಆಗಿರುವುದು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.
ಅಪಘಾತದ ವೇಳೆ ಜ್ಞಾನಶೇಖರನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಸಂಚರಿಸುತ್ತಿದ್ದ ಬಾಲುಸ್ವಾಮಿ, ರಾಜನ್ ಮತ್ತು ಸಂತೋಷ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಕ್ಷಿಸಿ ನಾಮಕ್ಕಲ್ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಅವಘಡ ನಡೆದ ಸ್ಥಳಕ್ಕೆ ಪರಮತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಅಪಘಾತದ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಇತ್ತ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: Watch: ಓವರ್ ಟೇಕ್ ಭರದಲ್ಲಿ ಕಾರು ಪಲ್ಟಿ.. ಎದೆ ಝಲ್ಲೆನ್ನಿಸುವ ದೃಶ್ಯ ಸೆರೆ