ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ.. ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ವಿಡಿಯೋ - ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು
🎬 Watch Now: Feature Video
ಚಂಡೀಗಢ : ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಇಲ್ಲಿನ ಸೆಕ್ಟರ್ 27 ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ, ಎಚ್ಚೆತ್ತ ಪ್ರಯಾಣಿಕರು ಕಾರಿನಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಐದು ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ : ಉತ್ತರಪ್ರದೇಶದಲ್ಲಿ ಮತ್ತೆ ಬುಲ್ಡೋಜರ್ ಸದ್ದು.. ರೇಪ್ ಕೇಸ್ ಆರೋಪಿಯ ನಿವಾಸ ಧ್ವಂಸ: ವಿಡಿಯೋ
ತಕ್ಷಣ ಸ್ಥಳೀಯರು ಚಂಡೀಗಢ ಪೊಲೀಸರಿಗೆ ಮತ್ತು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಚಂಡೀಗಢ ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ : Youth Congress protest: ಸಂಸದರ ಮನೆ ಮುತ್ತಿಗೆ ಯತ್ನ.. ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ