ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆ: ಬೆಳಗಾವಿಯಲ್ಲಿ ಕೈ ಕಾರ್ಯಕರ್ತರಿಂದ ಸಂಭ್ರಮಾಚರಣೆ - etv bharat kannada
🎬 Watch Now: Feature Video
ಬೆಳಗಾವಿ:ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗೆದ್ದು ಸ್ಪಷ್ಟ ಬಹುಮತದೊಂದಿಗೆ ಇಂದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಸತೀಶ್ ಜಾರಕಿಹೊಳಿ ಅವರ ಪೋಸ್ಟರ್ ಹಿಡಿದು, ಪಟಾಕಿ ಸಿಡಿಸಿ, ಸಿಹಿ ಹಂಚಿ, ಗುಲಾಬಿ ಎರಚಿ ಸಂಭ್ರಮಿಸಿದ ಕಾರ್ಯಕರ್ತರು, ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಪರ ಘೋಷಣೆ ಕೂಗಿದರು.
ಇದೇ ವೇಳೆ, ಈಟಿವಿ ಭಾರತ ಜೊತೆಗೆ ಮಾತನಾಡಿದ ಮಾಜಿ ಗ್ರಾ.ಪಂ.ಸದಸ್ಯ ಬಲರಾಮ ಮಾಸೇನಟ್ಟಿ, ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್, ಸಂಪುಟ ದರ್ಜೆ ಸಚಿವರಾಗಿ ಸತೀಶ್ ಜಾರಕಿಹೊಳಿ ಅವರು ಪ್ರಮಾಣವಚನ ಸ್ವೀಕರಿಸುತ್ತಿರುವುದು ನಮಗೆಲ್ಲಾ ಬಹಳಷ್ಟು ಸಂತಸ ತಂದಿದೆ. ಅವರಿಗೆ ಶುಭಾಶಯ ಕೋರುತ್ತೇನೆ. ಬರುವ ದಿನಗಳಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಬಡವರು, ಕನ್ನಡಿಗರ ಪರವಾಗಿ ಒಳ್ಳೆಯ ಆಡಳಿತ ನೀಡಲಿದೆ. ಅದೇ ರೀತಿ ಮುಂದೆ ದೇಶದಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರಾದ ಆನಂದ ಶಿರೂರ, ಚೇತನ ಪೂಜಾರಿ, ಅಮಿತ್ ರಜಪೂತ, ರಾಜು ಕ್ಯಾರಕಟ್ಟಿ, ದೀಪಕ ಕಾಮಕರ್ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ:ಸಿದ್ದು, ಡಿಕೆಶಿ ಪ್ರಮಾಣ ವಚನ: ಬಿಜೆಪಿಯೇತರ ಸರ್ಕಾರದ ಬಗ್ಗೆ ಸುಳಿವು ನೀಡಿದ ರಾಷ್ಟ್ರೀಯ ನಾಯಕರು...