ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರಿಂದ ಸಂಭ್ರಮಾಚರಣೆ - celebration by women bjp party workers

🎬 Watch Now: Feature Video

thumbnail

By ETV Bharat Karnataka Team

Published : Sep 20, 2023, 4:25 PM IST

ಶಿವಮೊಗ್ಗ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು. ನಗರದ ಜ್ಯೂಯಲ್ ರಾಕ್ ರಸ್ತೆಯಲ್ಲಿನ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಸಿಹಿಹಂಚಿ ಸಂತಸ ವ್ಯಕ್ತಪಡಿಸಿದರು. ನಂತರ ಪಟಾಕಿ ಸಿಡಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೊಸ ಸಂಸತ್​ ಕಟ್ಟಡದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದಾರೆ. ಇದರಿಂದ ಲೋಕಸಭೆಯಲ್ಲಿ ಮಹಿಳೆಯರ ಸಂಖ್ಯೆ 181ಕ್ಕೆ ಏರಿಕೆ ಆಗಲಿದೆ. ಲೋಕಸಭೆಯಲ್ಲಿ ಮಹಿಳಾ ಜನಪ್ರತಿನಿಧಿಗಳ ಬಲ ಹೆಚ್ಚಲಿದೆ. ಇದರಿಂದ ದೇಶದಲ್ಲಿ ಮಹಿಳೆಯರ ಧ್ವನಿ ಹೆಚ್ಚಾಗಲಿದೆ.

ಹಿಂದೆಲ್ಲಾ ಮಹಿಳಾ ಮಸೂದೆಯನ್ನು ಮಂಡಿಸಿದಾಗ ಬೆಂಬಲ ಸಿಗದೆ, ಮಸೂದೆಯು ಜಾರಿಯಾಗಲೇ ಇಲ್ಲ. ಈಗ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಲೋಕಸಭೆಯಲ್ಲಿ‌‌ ಮೊದಲ ಬಾರಿಗೆ ಮಂಡಿಸಿದಾಗಲೇ ಅದು ಒಪ್ಪಿಗೆ ಆಗಿ ಈಗ ಚರ್ಚೆಗೆ ಬರುತ್ತಿದೆ. ಇದರಿಂದ ಮಹಿಳೆಯರಿಗೆ ದೇಶದ ಆರ್ಥಿಕ ಪ್ರಗತಿಯಲ್ಲೂ ಭಾಗಿಯಾಗುವ ಅವಕಾಶ ಸಿಕ್ಕಂತಾಗಿದೆ ಎಂದು ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಸಂತೋಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಯುಪಿಎ ಸರ್ಕಾರದ ಕೂಸು, ಬಿಜೆಪಿ ಮಾಡಿರುವುದರಲ್ಲಿ ವಿಶೇಷ ಏನೂ ಇಲ್ಲ: ಸಚಿವ ಕೆ ಎಚ್ ಮುನಿಯಪ್ಪ

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.