ರಾಹುಲ್ ಗಾಂಧಿಗೆ ಇಡಿ ಡ್ರಿಲ್: ವಿಕೋಪಕ್ಕೆ ತಿರುಗಿ ಪಂಜಾಬ್ ಕಾಂಗ್ರೆಸ್ ಪ್ರತಿಭಟನೆ, ಕಾರ್ಯಕರ್ತರ ಮೇಲೆ ಜಲಫಿರಂಗಿ ಪ್ರಯೋಗ!
🎬 Watch Now: Feature Video
ಚಂಡೀಗಢ: ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ಚಂಡೀಗಢದಲ್ಲಿ ಪಂಜಾಬ್ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ರಾಜ್ಯಪಾಲರ ಭವನಕ್ಕೆ ತಲುಪಿತು. ಈ ವೇಳೆ, ಚಂಡೀಗಢ ಪೊಲೀಸರು ತಡೆದರು. ಪ್ರತಿಭಟನೆ ವಿಕೋಪಕ್ಕೆ ತಿರುಗುವುದನ್ನು ಕಂಡ ಪೊಲೀಸರು ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದರು. ಪ್ರತಿಭಟನೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸಿಗರಿಗೆ ಚಂಡೀಗಢ ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ ಏರಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪೊಲೀಸರು ಜಲಫಿರಂಗಿ ಬಳಸಿ, ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.
Last Updated : Feb 3, 2023, 8:23 PM IST