ಸರ್ಕಾರಿ ನೌಕರರ ಪ್ರತಿಭಟನೆ: ಸಂಜೆ ಆಯೋಗ, ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಇತ್ಯರ್ಥ- ಸಿಎಂ - ಅಬಕಾರಿ ಟೆಂಡರ್ನಲ್ಲಿ ಹಗರಣ
🎬 Watch Now: Feature Video
ಕಾರವಾರ: ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗ ರಚಿಸಲಾಗಿದೆ. ಮುಷ್ಕರದ ಹಿನ್ನೆಲೆಯಲ್ಲಿ ಎಸ್ಮಾ ಜಾರಿ ಮಾಡುವ ಪ್ರಮೇಯವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿದ್ದಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರಕಾರಿ ನೌಕರರು ನಮ್ಮವರು. ವೇತನ ಆಯೋಗದೊಂದಿಗೆ ಸಂಪರ್ಕದಲ್ಲಿದ್ದೇವೆ. ವರದಿ ತರಿಸಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ಇಂದು ಸಂಜೆ ಆಯೋಗ ಹಾಗೂ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಇತ್ಯರ್ಥಗೊಳಿಸಲಾಗುವುದು ಎಂದರು.
ಇನ್ನು ಅಬಕಾರಿ ಟೆಂಡರ್ನಲ್ಲಿ ಹಗರಣವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ವಿವರ ನೀಡಲಿ, ತನಿಖೆ ಮಾಡಲು ನಾವು ಸಿದ್ದ. ಪ್ರಿಯಾಂಕ‌್ ಖರ್ಗೆ ವಿರುದ್ಧ ಸಾಕಷ್ಟು ಆರೋಪಗಳಿವೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅವರ ಹೆಸರಿದೆ. ಲೋಕಾಯುಕ್ತ ಮಾಡಿದ್ದೇವೆ. ಬೇಕಾದರೆ ದೂರು ನೀಡಲಿ. ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.
ಇದನ್ನೂಓದಿ: ಉಸಿರಿರುವ ತನಕ ನಿಮ್ಮ ಸೇವೆ ಮಾಡುವೆ: ಶಿಗ್ಗಾಂವಿ ಜನರಿಗೆ ಸಿಎಂ ಬೊಮ್ಮಾಯಿ ಭರವಸೆ