ಧಾರವಾಡ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
🎬 Watch Now: Feature Video
ಧಾರವಾಡ : ರಾಜ್ಯ ಸರ್ಕಾರದ ವಿರುದ್ಧ ಇಲ್ಲಿನ ಡಿಸಿ ಕಚೇರಿ ಎದುರು ಬಿಜೆಪಿ ರೈತ ಮೋರ್ಚಾ ವತಿಯಿಂದ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು, ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯಿತು. ಆಗ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ನಡೆಯಿತು.
ಕೆಲವು ಕಾರ್ಯಕರ್ತರು ಉಪನಗರ ಪೊಲೀಸ್ ಠಾಣೆ ಸಿಪಿಐಗೆ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಬಿಜೆಪಿ ಮುಖಂಡ ಶಿವಾನಂದ ಮುತ್ತಣ್ಣವರ ಮತ್ತು ಸಿಪಿಐ ಶಂಕರಗೌಡ ಮಧ್ಯೆ ನೂಕಾಟ, ತಳ್ಳಾಟ ನಡೆಯಿತು. ಪೊಲೀಸರಿಂದ ಟೈರ್ ಕಿತ್ತುಕೊಂಡು ಕಾರ್ಯಕರ್ತರು ಟೈರ್ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಮತ್ತು ಚಲುವರಾಯ ಸ್ವಾಮಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಸ್ಥಳದಲ್ಲಿ ಭದ್ರತೆ ಕೈಗೊಂಡಿದ್ದರಿಂದ ಪ್ರತಿಭಟನೆ ಯಾವುದೇ ಅಹಿತಕರ ಘಟನೆಗೆ ತಿರುಗಲಿಲ್ಲ. ಕೃಷಿ ಸಚಿವ ಚಲುವರಾಯ ಸ್ವಾಮಿ ಅವರ ವಿರುದ್ಧ ಸರ್ಕಾರಿ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಲಂಚದ ಆರೋಪ ಕುರಿತು ರಾಜ್ಯಪಾಲರಿಗೆ ದೂರು.. ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ