ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ : 10ಕ್ಕೂ ಹೆಚ್ಚು ಕಾರುಗಳು ಜಖಂ - ಹುಣಸಗಿ ತಾಲೂಕಿನ ಕೊಡೇಕಲ್‌

🎬 Watch Now: Feature Video

thumbnail

By

Published : Apr 6, 2023, 11:06 PM IST

ಯಾದಗಿರಿ : ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಪರಸ್ಪರ ಕಲ್ಲು ತೂರಾಟ ಹಾಗೂ 10ಕ್ಕೂ ಹೆಚ್ಚು ಕಾರುಗಳು ಜಖಂಗೊಳಿಸಿರುವ ಘಟನೆ ಗುರುವಾರ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್‌ನಲ್ಲಿ ಸಂಭವಿಸಿದೆ. ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಸುರಪುರ ಸಂಸ್ಥಾನದ ಅರಸ ರಾಜಾ ಕೃಷ್ಣಪ್ಪ ನಾಯಕ ಮತ್ತು ಶಾಂತಗೌಡ ಚನ್ನಪಟ್ಟಣ ಅವರ ಮೆರವಣಿಗೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. 

ಕೊಡೇಕಲ್ ಗ್ರಾಮದಲ್ಲಿ ಕಾಲಜ್ಞಾನಿ ಬಸವಣ್ಣ ಪಲ್ಲಕ್ಕಿ ಉತ್ಸವ ನಡೆದಿತ್ತು. ಇದರಿಂದ ಭಾರಿ ಪ್ರಮಾಣದಲ್ಲಿ ಭಕ್ತರು ಸೇರಿದ್ದರು. ಇದರಿಂದ ವಾಹನಗಳು ಹೋಗಲು ದಾರಿಗಾಗಿ ಹಾರ್ನ್ ಮಾಡಿದ್ದಾರೆ. ಇದೇ ಗಲಾಟೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕಾರಿಗೆ ಅಡ್ಡವಾಗಿ ಕಾರೊಂದನ್ನು ನಿಲ್ಲಿಸಿರುವುದೂ ವಾಗ್ವಾದಕ್ಕೆ ಎಡೆಮಾಡಿಕೊಟ್ಟಿದೆ ಎನ್ನಲಾಗಿದೆ. ಪೊಲೀಸರು ಗಲಾಟೆ ತಡೆಯಲು ಸಾಕಷ್ಟು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಘಟನೆಯಿಂದ ಕೊಡೇಕಲ್ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್​ ಬಂದೋಬಸ್ತ್​ ಒದಗಿಸಲಾಗಿದೆ.

ಇದನ್ನೂ ಓದಿ: ಕೈ ತಪ್ಪಿದ ಟಿಕೆಟ್‌: ಮಂಡ್ಯದಲ್ಲಿ ಕೀಲಾರ ರಾಧಾಕೃಷ್ಣ ಬೆಂಬಲಿಗರ ಆಕ್ರೋಶ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.