ಯಾವುದೇ ಆಡಿಯೋ, ವಿಡಿಯೋ ಬಗ್ಗೆ ಮಾತನಾಡುವುದಿಲ್ಲ: ಸಿಎಂ ಬೊಮ್ಮಾಯಿ - ಈಟಿವಿ ಭಾರತ ಕನ್ನಡ
🎬 Watch Now: Feature Video
ಹುಬ್ಬಳ್ಳಿ: ಯಾವುದೇ ಆಡಿಯೋ ವಿಡಿಯೋಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಪಂಚಮಸಾಲಿ ಮೀಸಲಾತಿ ಬಗ್ಗೆ ಈಗಾಗಲೇ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಮಕರ ಸಂಕ್ರಾಂತಿ ಶುಭಾಶಯಗಳು. ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಬಂಟರ ಸಂಘದ ಕಾರ್ಯಕ್ರಮಕ್ಕೆ ಬಂದಿರುವುದಾಗಿ ಹೇಳಿದರು. ಪಂಚಮಸಾಲಿ ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು. ಸಿ.ಪಿ.ಯೋಗೀಶ್ವರ ಆಡಿಯೋ ವಿಚಾರ ಬಗ್ಗೆ ಮಾತನಾಡಿ, ನಾನು ಯಾವುದೇ ಆಡಿಯೋ ವಿಡಿಯೋ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ವಿಮಾನ ನಿಲ್ದಾಣದಿಂದ ನಿರ್ಗಮಿಸಿದರು.
Last Updated : Feb 3, 2023, 8:38 PM IST