ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪುಟಿದೇಳಲಿದೆ: ಬಸವರಾಜ ಬೊಮ್ಮಾಯಿ - cm bommai first rection
🎬 Watch Now: Feature Video
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತದಾರ ನಿರ್ಧಾರಕ್ಕೆ ತಲೆ ಬಾಗಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಈ ಬಾರಿಯ ಚುನಾವಣೆಯಲ್ಲಿ ಎನೆಲ್ಲ ಕೊರತೆಗಳಾಗಿವೆ ಎಂಬುದರ ಬಗ್ಗೆ ಗಮನಹರಿಸಲಾಗುತ್ತದೆ. ಸಂಪೂರ್ಣ ಫಲಿತಾಂಶ ಬಂದ ನಂತರ ಈ ಬಗ್ಗೆ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ. ನಾವು ಈ ಬಗ್ಗೆ ವಿಶ್ಲೇಷಿಸುವುದರ ಜೊತೆಗೆ, ವಿವಿಧ ಹಂತಗಳಲ್ಲಿ ಯಾವ ಕೊರತೆಗಳಾಗಿವೆ ಎಂಬುದರ ಬಗ್ಗೆ ಚರ್ಚಿಸಲಾಗುವುದು. ಈ ಫಲಿತಾಂಶವನ್ನು ಒಪ್ಪಿಕೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪುಟಿದೆದ್ದು ಬರಲಿದೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರವಾದ ಶಿಗ್ಗಾಂವಿಯಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸೀರ್ ಅಹ್ಮದ್ ಖಾನ್ ವಿರುದ್ಧ ಸರಿಸುಮಾರು 28 ಸಾವಿರ ಮತಗಳ ಅಂತರದಿಂದ ಹಾಲಿ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಕಾರ್ಯ ಇನ್ನೂ ಪ್ರಗತಿಯಲ್ಲಿದೆ.
ಇದನ್ನೂ ಓದಿ: ಗೆಲುವಿನ ಸಂಭ್ರಮದಲ್ಲಿ ಕಾಂಗ್ರೆಸ್: ಎಲ್ಲೆಡೆ ಪಟಾಕಿ ಹಚ್ಚಿ ಕಾರ್ಯಕರ್ತರ ಖುಷಿ