10 ಸಾವಿರ ಕೋಟಿ ಅನುದಾನ ಹೇಳಿಕೆ ವಿಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಹೀಗಿದೆ - ಜಮೀರ್ ಅಹ್ಮದ್
🎬 Watch Now: Feature Video
Published : Dec 6, 2023, 3:47 PM IST
ಬೆಳಗಾವಿ: "ಮಸ್ಲಿಮರು ಸೇರಿ ಎಲ್ಲಾ ಸಮುದಾಯದವರಿಗೂ ಅನುದಾನ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದೆ, ಅದನ್ನು ನೀವು(ಮಾಧ್ಯಮದವರು) ಬರೆದರಾ?" ಎಂದು ಸಿಎಂ ಸಿದ್ದರಾಮಯ್ಯ ಅವರು ಗರಂ ಆದ ಪ್ರಸಂಗ ನಡೆಯಿತು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ಅನುದಾನ ನೀಡುತ್ತೇನೆ ಎಂಬ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ಅವರು, "ನಾನು ಮುಸ್ಲಿಂರು ಸೇರಿದಂತೆ ಎಲ್ಲ ಸಮುದಾಯಗಳಿಗೆ ಅನುದಾನ ನೀಡುತ್ತೇನೆ ಎಂದಿದ್ದೆ. ಆದರೆ ಮಾಧ್ಯಮಗಳು ನನ್ನ ಹೇಳಿಕೆಯನ್ನು ಸರಿಯಾಗಿ ಬರೆದಿಲ್ಲ, ಹೀಗಾಗಿ ನನ್ನ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ" ಎಂದರು.
ಅಧಿಕಾರದಲ್ಲಿದ್ದಾಗ ಬಿಜೆಪಿಯವರಿಗೆ ಗುಂಡಿ ಮುಚ್ಚಲಾಗಲಿಲ್ಲ: "ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿ ಇದ್ದಾಗ ಬೆಂಗಳೂರಿನ ಗುಂಡಿ ಮುಚ್ಚಲಾಗಲಿಲ್ಲ, ಹೈಕೋರ್ಟ್ ಇವರಿಗೆ ಛೀಮಾರಿ ಹಾಕಿತ್ತು. ಬ್ರಾಂಡ್ ಬೆಂಗಳೂರು ಬಗ್ಗೆ ಮಾತನಾಡುವುದಕ್ಕೆ ಅವರಿಗೆ ಯಾವ ನೈತಿಕತೆ ಇದೆ?" ಎಂದು ಬಿಜೆಪಿ ನಾಯಕರ ಹೇಳಿಕೆಗೆ ಸಿಎಂ ತಿರುಗೇಟು ನೀಡಿದರು.
ಸಚಿವರು ಸದನಕ್ಕೆ ಗೈರಾಗಿ ತೆಲಂಗಾಣಕ್ಕೆ ಹೋಗಿದ್ದಾರೆ ಎಂದು ಆರೋಪದ ಬಗ್ಗೆ ಪ್ರತಿಕ್ರಿಯಿಸಿ, "ಎಲ್ಲರೂ ತೆಲಂಗಾಣಕ್ಕೆ ಹೋಗಿಲ್ಲ. ಇಬ್ಬರೂ ಮಾತ್ರ ಹೋಗಿದ್ದಾರೆ. ರಾಜಕೀಯವನ್ನೂ ಮಾಡಬೇಕಲ್ಲ. ಮುನಿಯಪ್ಪ, ಜಾರ್ಜ್ ಮತ್ತು ನಾಗೇಂದ್ರ ಸೇರಿ ಎಲ್ಲರೂ ವಾಪಸ್ ಆಗಿದ್ದಾರೆ. ಜಮೀರ್ ಅಹ್ಮದ್ ಮತ್ತು ಡಿ.ಕೆ. ಶಿವಕುಮಾರ್ ಮಾತ್ರ ಅಲ್ಲಿಂದ ವಾಪಸ್ ಬರಬೇಕು" ಎಂದು ಹೇಳಿದರು.
ಇದನ್ನೂ ಓದಿ: ಸಿಎಂ ಮುಸ್ಲಿಮರ ಓಲೈಕೆ ಮಾಡುತ್ತಿರುವುದು ಶೋಭೆ ತರಲ್ಲ: ಬಿ.ಎಸ್.ಯಡಿಯೂರಪ್ಪ